ದಕ್ಷಿಣ ಕನ್ನಡ: ಧರ್ಮಸ್ಥಳ ಸರಣಿ ಕೊಲೆ, ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಒಂದೆಡೆ ಹಲವು ಅಸ್ತಿಪಂಜರಗಳು ಪತ್ತೆಯಾಗಿದ್ದು, ಪ್ರಕರಣ ಭಾರೀ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮತ್ತೊಂದೆಡೆ ಮಾಧ್ಯಮದವರ ಮೇಲೆ ಹಲ್ಲೆ ನಡೆಸಲಾಗಿದೆ.
ಹೌದು, ನಿನ್ನೆ ( ಆಗಸ್ಟ್ 6 ) ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಸೌಜನ್ಯ ಮನೆಗೆ ಭೇಟಿ ನೀಡಿ ಅವರ ಕುಟುಂಬದವರ ಜೊತೆ ಮಾತನಾಡಿದ್ದರು.
ಹೀಗೆ ರಜತ್ ಸೌಜನ್ಯ ಮನೆಯಿಂದ ಹೊರಬಂದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ಈ ವೇಳೆ ಕಾರುಗಳಲ್ಲಿ ಹಾಗೂ ಆಟೊಗಳಲ್ಲಿ ಬಂದ ಕಿಡಿಗೇಡಿಗಳು ಏಕಾಏಕಿ ಕುಡ್ಲ ರಾಂಪೇಜ್ ಹಾಗೂ ಯುನೈಟೆಡ್ ಮೀಡಿಯಾ ಈ ಎರಡು ಚಾನೆಲ್‌ಗಳ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಹಿಂದಿನಿಂದಲೂ ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ವಿಡಿಯೊ ಮಾಡಿದ್ದ ಇವರ ಮೇಲೆ ಕ್ಷೇತ್ರದ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆದಿದೆ.
ಹೀಗೆ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಗೂಂಡಾಗಳ ವರ್ತನೆಯನ್ನು ಕಣ್ಣಾರೆ ಕಂಡ ರಜತ್ ಘಟನೆಯನ್ನು ಬಿಚ್ಚಿಟ್ಟಿದ್ದಾರೆ. ಕಾರುಗಳಲ್ಲಿ ಬಂದ ಗೂಂಡಾಗಳು ತುಂಬಾ ಕೆಟ್ಟ ರೀತಿಯಲ್ಲಿ ನಡೆದುಕೊಂಡರು ಎಂದು ಹೇಳಿದ್ದಾರೆ. ಅಲ್ಲದೇ ಹಗಲಲ್ಲೇ ಹೀಗೆ ನಡೆದುಕೊಳ್ಳುವ ಇವರು ಇನ್ನು ರಾತ್ರಿ ಸಮಯದಲ್ಲಿ ಎನ್ನು ಏನೆಲ್ಲ ಮಾಡಬಹುದು ಎಂದು ರಜತ್ ಕಿಡಿಕಾರಿದ್ದಾರೆ. ರಜತ್ ಮಾತನಾಡಿದ ವಿಡಿಯೊ ಮುಂದಿದೆ.
ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ: ಕಲ್ಲು ತೂರಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೊ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


