ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳನ್ನು ಸಮಾಲೋಚನೆ ಮೂಲಕ ವರ್ಗಾವಣೆ ಮಾಡುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
2026ನೇ ಸಾಲಿಗೆ ಸಂಬಂಧಿಸಿದಂತೆ ಸೋಮವಾರ ಈ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು 2026ರ ಜನವರಿ ಒಂದರಂದು ವರ್ಗಾವಣಾಕಾಂಕ್ಷಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆಯುಕ್ತಾಲಯಕ್ಕೆ ಅರ್ಜಿ ಸಲ್ಲಿಸಬೇಕು.
ಜನವರಿ 15ರಂದು ಅಧಿಕಾರಿ/ಸಿಬ್ಬಂದಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗುವುದು. ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 31 ಕಡೆಯ ದಿನವಾಗಿದ್ದು ಫೆಬ್ರವರಿ 15ರಂದು ಅಂತಿಮ ಪಟ್ಟಿಯನ್ನು ಹೊರಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ವಿಶೇಷ ವರ್ಗದ ಕೋರಿಕೆ ವರ್ಗಾವಣೆಗಳ ಅರ್ಜಿಗಳನ್ನು ಜನವರಿ 1ರಿಂದ 15ರವರೆಗೆ ಆಯುಕ್ತಾಲಯಕ್ಕೆ ಸಲ್ಲಿಸಬೇಕಾಗಿದ್ದು ಜನವರಿ 31ರಂದು ತಾತ್ಕಾಲಿಕ ಪಟ್ಟಿ ಪ್ರಕಟವಾಗುತ್ತದೆ. ಮಾರ್ಚ್ 1ರಂದು ಅಂತಿಮ ಪಟ್ಟಿ ಪ್ರಕಟಗೊಳ್ಳಲಿದೆ. ಇನ್ನು ಆಯುಕ್ತಾಲಯದ ಅಂತಿಮ ಪಟ್ಟಿಯಂತೆ ಏಪ್ರಿಲ್ 5ರಿಂದ 15ರವರೆಗೆ ವೃಂದವಾರು ಸಮಾಲೋಚನೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ಪ್ರಕಟಣೆ ವಿವರ ನೀಡಿದೆ.
ಧರ್ಮಸ್ಥಳ: ಮತ್ತೆ ಎಸ್‌ಐಟಿ ಅಧಿಕಾರಿಗಳನ್ನು ಗುಡ್ಡ ಹತ್ತಿಸಿದ ಅನಾಮಿಕ; ಇಂದು ಎಷ್ಟು ಅಸ್ತಿಪಂಜರ?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


