ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನರಾಗಿದ್ದಾರೆ. ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು.ಹಲವು ಗಣ್ಯರು ಸೂಲಿಬೆಲೆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯನ್ನು ದೇವದಾಸ್ ಸುಬ್ರಾಯ ಶೇಟ್ ಅವರು ನೀಡಿದ್ದಾರೆ. ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿದ್ದರು.
ತಂದೆಯ ಅಗಲಿಕೆಯಿಂದ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಭಾವನಾತ್ಮಕವಾಗಿ ತಮ್ಮ ಪಿತಾಜಿಯ ನೆನಪುಗಳನ್ನು ಹಂಚಿಕೊಂಡಿದ್ದಾರೆ. “ಬದುಕಿನ ಪಯಣದಲ್ಲಿ ಶಾಶ್ವತವಾಗಿ ಯಾರೂ ಜೊತೆಗಿರಲಾರರು. ಆದರೆ ಕೆಲವರ ವಿಯೋಗ ಅನಿರೀಕ್ಷಿತ ಮತ್ತು ದುಃಖಮಯ. ಅಪ್ಪ ಇಂದು ಬೆಳಿಗ್ಗೆಯಷ್ಟೇ ಯಾತ್ರೆ ಮುಗಿಸಿ ಅಗಲಿದರು. ಕೆಲದಿನಗಳ ಶ್ವಾಸಕೋಶದ ಸಮಸ್ಯೆ ಅವರನ್ನು ಈ ಹಂತಕ್ಕೊಯ್ಯುವುದೆಂದು ನಾನೆಣಿಸಿರಲಿಲ್ಲ. ಅವರನ್ನು ಪ್ರೀತಿಸುವವರ ಬಹಳ ಮಂದಿ. ಎಲ್ಲರಿಗೂ ವಿಷಯ ಮುಟ್ಟಿಸುವುದು ಹೇಗೆ? ಅದಕ್ಕೇ ಇಲ್ಲಿ ಹಂಚಿಕೊಳ್ಳುತ್ತಿರುವೆ. ಅವರ ಸದ್ಗತಿ ಗೆ ಪ್ರಾರ್ಥಿಸಿಕೊಳ್ಳಿ” ಎಂದು ಬರೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂತಾಪ ರಾಷ್ಟ್ರವಾದಿ ಚಿಂತಕ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರ ನಿಧನಕ್ಕೆ ಸಂತಾಪ ಕೋರುವೆ. ಮಾನ್ಯ ಚಕ್ರವರ್ತಿ ಸೂಲಿಬೆಲೆ ಅವರ ಕುಟುಂಬ ವರ್ಗದವರಿಗೆ ಈ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.
ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ಪೂಜ್ಯ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೂಡ ತಮ್ಮ ಸಂತಾಪ ಸೂಚನೆ ಹಂಚಿಕೊಂಡು, “ಸಮಾಜಕ್ಕೆ ರಾಷ್ಟ್ರ, ಧರ್ಮಕ್ಕಾಗಿ ಜೀವನವನ್ನು ಮುಡಿಪಾಗಿಟ್ಟ ಪುತ್ರನನ್ನು ನೀಡಿದ ತೀರ್ಥರೂಪರಾದ ದೇವದಾಸ್ ಶೇಟ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಕುಟುಂಬ, ಬಂಧುಗಳು ಹಾಗೂ ಶಿಷ್ಯವರ್ಗಕ್ಕೆ ಭಗವಂತನು ಧೈರ್ಯ ನೀಡಲಿ” ಎಂದು ಬರೆದಿದ್ದಾರೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


