ಎಐ ತಂತ್ರಜ್ಞಾನ ಎಲ್ಲಾ ಕ್ಷೇತ್ರಗಳಿಗೂ ಕಾಲಿಟ್ಟು ಕ್ರಾಂತಿ ಮಾಡುತ್ತಿದೆ. ಇದರ ಮೂಲಕ ಆರೋಗ್ಯದ ಸಲಹೆಯನ್ನು ಕೂಡ ಬಹುತೇಕ ಮಂದಿ ಪಡೆಯುತ್ತಿದ್ದಾರೆ. ಇನ್ನೂ ಹಲವು ಆಸ್ಪತ್ರೆಗಳಲ್ಲಿ ಅಳವಡಿಸುತ್ತಿದ್ದಾರೆ.
ಮಂಗಳೂರು ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಎಐ ಆಧಾರಿತ ತಂತ್ರಜ್ಞಾನವನ್ನು ಅಳವಡಿಕೆ ಮಾಡಲಾಗಿದೆ. ಡೋಜಿ ಎಐ ಆಧಾರಿತ ಸಂಪರ್ಕ ರಹಿತ ಮತ್ತು ರೋಗಿಗಳ ಮೇಲ್ವಿಚಾರಣೆ, ಮುನ್ನೆಚ್ಚರಿಕೆ ನೀಡುವ ವ್ಯವಸ್ಥೆ ಹೊಂದಿದ ಅತ್ಯಾಧುನಿಕ ವ್ಯವಸ್ಥೆಯನ್ನು ಮಂಗಳೂರು ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಅಳವಡಿಕೆ ಮಾಡಲಾಗಿದೆ.
ರೋಗಿಗಳಲ್ಲಿ ಹೃದಯ ಸಂಬಂಧಿ, ಮಧುಮೇಹ, ರಕ್ತದೊತ್ತಡ, ದೇಹದ ಉಷ್ಣತೆ, ಇಸಿಜಿ ಸಹಿತ ವಿವಿಧ ಮಾಹಿತಿಗಳ ಆಧಾರದ ಮೇಲೆ ದೂರದಿಂದಲೇ ನಿಗಾ ಇರಿಸಲು ಆರೋಗ್ಯ ಕಾರ್ಯಕರ್ತರಿಗೆ ಈ ತಂತ್ರ ಸಹಾಯ ಆಗುತ್ತದೆ. ಮುಂಚೆಯೇ ಎಚ್ಚರಿಕೆ ನೀಡುವ ಸೌಲಭ್ಯ ಇದರಲ್ಲಿ ಇದ್ದು, ರೋಗಿಯ ಆರೋಗ್ಯದಲ್ಲಿ ಆಗುವ ಬದಲಾವಣೆಯನ್ನ ಮೊದಲೇ ತಿಳಿಸುತ್ತದೆ.
ಡೋಜಿಯ ಪರಿಹಾರವು ಕ್ಲೌಡ್ ಆಧಾರಿತ ಸೌಲಭ್ಯ ಆಗಿದೆ. ಇದರ ಕೇಂದ್ರೀಯ ಮತ್ತು ದೂರ ನಿಯಂತ್ರಣ ವ್ಯವಸ್ಥೆಯು ರೋಗಿಗಳ ಸುರಕ್ಷೆ, ವೈದ್ಯಕೀಯ ಫಲಿತಾಂಶಗಳಿಗಾಗಿ ಸಮಯೋಚಿತ ವೈದ್ಯಕೀಯ ಸೇವೆ ಒದಗಿಸಲು ರೋಗಿಯನ್ನು ನಿರಂತರವಾಗಿ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಆರೋಗ್ಯ ಪೂರೈಕೆದಾರರಿಗೆ ಅವಕಾಶ ಸಿಗಲಿದೆ.
ರೋಗಿಗಳಲ್ಲಿ ಹೃದಯ ಸಂಬಂಧಿ, ಮಧುಮೇಹ, ರಕ್ತದೊತ್ತಡ, ದೇಹದ ಉಷ್ಣತೆ, ಇಸಿಜಿ ಸಹಿತ ವಿವಿಧ ಮಾಹಿತಿಗಳ ಆಧಾರದ ಮೇಲೆ ದೂರದಿಂದಲೇ ನಿಗಾ ಇರಿಸಲು ಆರೋಗ್ಯ ಕಾರ್ಯಕರ್ತರಿಗೆ ಈ ತಂತ್ರ ಸಹಾಯ ಆಗುತ್ತದೆ. ಮುಂಚೆಯೇ ಎಚ್ಚರಿಕೆ ನೀಡುವ ಸೌಲಭ್ಯ ಇದರಲ್ಲಿ ಇದ್ದು, ರೋಗಿಯ ಆರೋಗ್ಯದಲ್ಲಿ ಆಗುವ ಬದಲಾವಣೆಯನ್ನ ಮೊದಲೇ ತಿಳಿಸುತ್ತದೆ ಎಂದು ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ ಮಾಹಿತಿ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


