ಚಿಕ್ಕಬಳ್ಳಾಪುರ ಜಿಲ್ಲೆಯ ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಕೇರಳ ಮೂಲದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಯಸಿ ತನ್ನ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದು ಈ ಕಠಿಣ ನಿರ್ಧಾರ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೇರಳದ ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್ (26) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇವರು ಪೇರೇಸಂದ್ರದ ಖಾಸಗಿ ಕಾಲೇಜಿನಲ್ಲಿ ಅಲೈಡ್ ಸೈನ್ಸ್ ಕೋರ್ಸ್‌ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಕೋರ್ಸ್ ಮುಗಿಸಿ ಮನೆಗೆ ತೆರಳಬೇಕಿದ್ದ ಶಬ್ಬೀರ್, ಭಾನುವಾರ (ಸೆಪ್ಟೆಂಬರ್ 7) ಬೆಳಗ್ಗೆ ಹಾಸ್ಟೆಲ್‌ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸರು ಕೋಣೆಯನ್ನು ಪರಿಶೀಲಿಸಿದಾಗ, ಶಬ್ಬೀರ್ ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ. “I didn’t stop anything until. I always love you forever, Athiti You are my first and you are My last” ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.
ಇದರಿಂದ, ತಮ್ಮ ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದ ಶಬ್ಬೀರ್‌ಗೆ ಆಕೆ ಕಳೆದ ಕೆಲ ದಿನಗಳಿಂದ ಸರಿಯಾಗಿ ಸ್ಪಂದಿಸದೆ, ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದರಿಂದ ಮನನೊಂದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಕುರಿತು ಪೇರೇಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ರಕ್ತಚಂದ್ರ ಗ್ರಹಣ: ಆಕಾಶದ ವಿಸ್ಮಯಕ್ಕೆ ಕ್ಷಣಗಣನೆ, ವೀಕ್ಷಣೆ ಹೇಗೆ?
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


