ಪಾಕಿಸ್ತಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿರುವ ವೇಳೆಯೇ ಬಾಂಬ್ ಸ್ಫೋಟ ನಡೆದಿದೆ. ಪಾಕಿಸ್ತಾನದ ಮಿಡಿಯಾ ಏಜೆನ್ಸಿ ‘ಡಾನ್’ ವರದಿ ಪ್ರಕಾರ, ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪ್ಲಾನ್ ಮಾಡಿಕೊಂಡೇ ಈ ಸ್ಪೋಟ ನಡೆಸಲಾಗಿದೆ ಎಂದು ಪಾಕಿಸ್ತಾನದ ಪೊಲೀಸರು ಹೇಳಿಕೆ ನೀಡಿದ್ದಾರೆ.
ಸದ್ಯ ಬಾಂಬ್ ಸ್ಫೋಟದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಭಯಬೀತ ಜನರು ಮೈದಾನದಿಂದ ಓಡಿ ಬರುತ್ತಿರೋದನ್ನು ಕಾಣಬಹುದಾಗಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಪಾಕ್ ವರದಿಗಳ ಪ್ರಕಾರ, ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಜಿಲ್ಲೆಯ ಖಾರ್ ತಹಸೀಲ್ ಎಂಬ ಪ್ರದೇಶದ ಕ್ರಿಕೆಟ್ ಗ್ರೌಂಡ್‌ನಲ್ಲಿ ಸ್ಪೋಟ ಸಂಭವಿಸಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಭಯೋತ್ಪಾದಕರು ಠಾಣೆ ಮೇಲೆಯೇ ದಾಳಿ ನಡೆಸಲು ಪ್ರಯತ್ನಿಸಿದ್ದರು. ಆದ್ರೆ ಉಗ್ರರ ಈ ಸಂಚು ವಿಫಲವಾಗಿತ್ತು. ಈ ಹಿನ್ನೆಲೆ ಕ್ರಿಕೆಟ್ ಮೈದಾನದಲ್ಲಿ ವಿಧ್ವಂಸಕ ಕೃತ್ಯ ಎಸೆಗಲಾಗಿದೆ.ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ತಂತ್ರಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಾಕಿಸ್ತಾನ ಮಿಡಿಯಾ ಏಜೆನ್ಸಿ ಡಾನ್ ಜೊತೆ ಮಾತನಾಡಿರುವ ಬಜೌರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಕಾಸ್ ರಫೀಕ್, ಪ್ಲಾನಿಂಗ್ ಮಾಡಿಕೊಂಡೇ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಮೃತರಾಗಿದ್ದು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


