Wednesday, September 2, 2026
spot_img
More
    spot_img
    HomeLatest newsಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ‌ ಎಷ್ಟು ಪ್ರಕರಣಗಳು ದಾಖಲಾಗಿವೆ ಗೊತ್ತೆ: ಕಟ್ಟಿದ ಫೈನ್ ಎಷ್ಟು...

    ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ‌ ಎಷ್ಟು ಪ್ರಕರಣಗಳು ದಾಖಲಾಗಿವೆ ಗೊತ್ತೆ: ಕಟ್ಟಿದ ಫೈನ್ ಎಷ್ಟು ?

    ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೂ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಕೇಸ್‌ಗಳು ದಾಖಲಾಗಿವೆ.‌ಸಿಎಂ ಸಿದ್ದರಾಮಯ್ಯ ಅವರು ಬಳಸುವ ಫಾರ್ಚೂನರ್‌ ಕಾರಿನ ಮೇಲೆ ಏಳು ಕೇಸ್‌ ಇತ್ತು ಹಾಗಾಗಿ ಸಿದ್ದರಾಮಯ್ಯ ಅವರು ಸಾರ್ವಜನಿಕರಂತೆ ದಂಡ ಪಾವತಿಸಿದ್ದಾರೆ ಎನ್ನಲಾಗಿದೆ.  ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ.

    Advertisement

    ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ.50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರಕಾರವು ಅವಕಾಶ ಕಲ್ಪಿಸಿದ್ದು, ಸಿದ್ದರಾಮಯ್ಯ ಅವರು ಬಳಸುತ್ತಿರುವ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ದಂಡ ಪಾವತಿಯಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.

    ದಿನನಿತ ಸಿದ್ದರಾಮಯ್ಯ ಫಾರ್ಚೂನರ್ ಕಾರನ್ನು ಬಳಸುತ್ತಿದ್ದು, 2024ರಿಂದ ಇಲ್ಲಿವರೆಗೆ 7 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ಆರು ಕೇಸ್‌ಗಳು ಕಾರಿನಲ್ಲಿ ಸೀಟ್‌ ಬೆಲ್ಟ್‌ ಧರಿಸದೇ ಇದ್ದ ಕಾರಣಕ್ಕೆ ದಾಖಲಾಗಿದ್ದವು. ಇನ್ನು ಒಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಸಿಎಂ ಅವರಿದ್ದ ಕಾರು ಅತಿ ವೇಗವಾಗಿ ಸಂಚರಿಸಿ ನಿಯಮ ಉಲ್ಲಂಘನೆಯಾಗಿತ್ತು.ಹೀಗಾಗಿ ಸಿಎಂ ಕಾರಿನ ಮೇಲೂ ಟ್ರಾಫಿಕ್‌ ನಿಯಮ ಉಲ್ಲಂಘಿಸಿದ ಪ್ರಕರಣಗಳು ದಾಖಲಾಯ್ತು.

    2024ರ ಜನವರಿ 24ರಂದು ಮಧ್ಯಾಹ್ನ 12.19ರಂದು ಒಲ್ಡ್ ಏರ್​ಪೋರ್ಟ್ ರಸ್ತೆಯ ಲೀಲಾ ಪ್ಯಾಲೇಸ್ ಜಂಕ್ಷನ್ ಬಳಿ ಹೋಗುವಾಗ ಸಿದ್ದರಾಮಯ್ಯ ಅವರು ಸೀಟು ಬೆಲ್ಟ್ ಧರಿಸಿಲ್ಲ. ಅದೇ ಜಂಕ್ಷನ್​ನಲ್ಲಿ ಫೆಬ್ರುವರಿ ಹಾಗೂ ಆಗಸ್ಟ್​ನಲ್ಲಿ ಮತ್ತೆರಡು ಪ್ರಕರಣಗಳು ದಾಖಲಾಗಿದ್ದವು. ಮಾರ್ಚ್​​ನಲ್ಲಿ ಚಂದ್ರಿಕಾ ಹೋಟೆಲ್​ ಜಂಕ್ಷನ್ ಹಾಗೂ ಆಗಸ್ಟ್​ನಲ್ಲಿ ಶಿವಾನಂದ ಸರ್ಕಲ್ ಹಾಗೂ ಡಾ.ರಾಜ್​ಕುಮಾರ್ ಪ್ರತಿಮೆ ಜಂಕ್ಷನ್​ಗಳ ಬಳಿ ಸೀಟು ಬೆಲ್ಟ್ ಧರಿಸಿದೇ ನಿಯಮ ಉಲ್ಲಂಘಿಸಿದ ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಜುಲೈ 9ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಏರ್​ಪೋರ್ಟ್ ಎಕ್ಸ್​ಪ್ರೆಸ್ ಕಾರಿಡಾರ್​ನಲ್ಲಿ ಸಿಎಂ ಅವರಿದ್ದ ಕಾರು ಓವರ್ ಸ್ಟೀಡಾಗಿ ಚಲಾಯಿಸಿ ನಿಯಮ ಉಲ್ಲಂಘಿಸಿತ್ತು.

    ಇತ್ತೀಚೆಗಷ್ಟೇ ಸಂಚಾರ ಪೊಲೀಸರು ಟ್ರಾಫಿಕ್‌ ದಂಡ ಪಾವತಿಸಲು ರಿಯಾಯಿತಿ ಘೋಷಿಸಿದ್ದರು. ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರವೇ ಶೇ 50ರಷ್ಟು ಡಿಸ್ಕೌಂಟ್‌ ಸೌಲಭ್ಯ ನೀಡಿದ್ದು, ಸಿದ್ದರಾಮಯ್ಯ ಕೂಡ  ದಂಡ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಸಿಬ್ಬಂದಿ ಸುಮಾರು 2,500 ರೂಪಾಯಿ ದಂಡ ಪಾವತಿದ್ದು, ಈಗ ಅವರ ಕಾರಿನ ಮೇಲಿದ್ದ ಟ್ರಾಫಿಕ್ ಕೇಸ್ಗಳು ಈಗ ಕ್ಲಿಯರ್‌ ಆಗಿವೆ ಎಂದು ಹೇಳಲಾಗುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading