ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ವರ್ಷದಿಂದ ಉಚಿತವಾಗಿ ನೋಟ್ಬುಕ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ವರ್ಷದಿಂದ ಉಚಿತವಾಗಿ ನೋಟ್ಬುಕ್ ವಿತರಿಸಲಾಗುವುದು. ಈಗಾಗಲೇ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡುತ್ತಿದ್ದೇವೆ. ಮಕ್ಕಳಿಗಾಗಿ ಹಾಲು, ಮೊಟ್ಟೆ ಮತ್ತು ಬಿಸಿಯೂಟ ಯೋಜನೆ ಜಾರಿಗೊಳಿಸಲಾಗಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ವರ್ಷಕ್ಕೆ ₹65 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಗಳನ್ನು ಉತ್ತೇಜಿಸಲು ಈ ರೀತಿಯ ನೀತಿ ಜಾರಿಗೆ ತರಬೇಕು. ಎಲ್ಲ ಮಕ್ಕಳೂ ಸರ್ಕಾರಿ ಶಾಲೆಗೆ ಬರುವಂತಾಗಬೇಕು. ಅದಕ್ಕೆ ಬೇಕಿರುವ ಸವಲತ್ತುಗಳನ್ನು ಒದಗಿಸಿಕೊಡುತ್ತಿದ್ದೇವೆ. 800 ಕೆಪಿಎಸ್ ಶಾಲೆಗಳ ಆರಂಭಕ್ಕೆ ಸಂಪುಟ ಅನುಮೋದನೆ ನೀಡಿದೆ.
ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲು 27 ಕೋಟಿ ರೂ. ಒದಗಿಸಲಾಗಿದೆ. ಮಕ್ಕಳಿಗೆ ಹಾಲು, ಮೊಟ್ಟೆ, ರಾಗಿ ಮಾಲ್ಟ್, ಬಿಸಿಯೂಟ, ಶೂ, ಸಾಕ್ಸ್ ಸೇರಿ ಹಲವು ಕಾರ್ಯಕ್ರಮ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆಗೆ ನೋಟ್ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ನೀಡಬೇಕು ಎಂದು ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಮನವಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದೇನೆ. ಮುಂದಿನ ವರ್ಷದಿಂದಲೇ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
,ರಕ್ತಚಂದ್ರ ಗ್ರಹಣ: ಆಕಾಶದ ವಿಸ್ಮಯಕ್ಕೆ ಕ್ಷಣಗಣನೆ, ವೀಕ್ಷಣೆ ಹೇಗೆ?
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


