ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದೆ.ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಬರುತ್ತಿರುವ ವೇಳೆ ಸಮೀಪದ ಅಂಗಡಿ ಮೇಲೆ ಹತ್ತಿದ್ದ ಇಬ್ಬರು ದುಷ್ಕರ್ಮಿಗಳು ಕಲ್ಲು ತೆಗೆದುಕೊಂಡು ಮೆರವಣಿಗೆಯಲ್ಲಿ ದಾಳಿ ಮಾಡಿದ್ದಾರೆ. ಈ ವೇಳೆ ಮಂಗಳವಾರ ಪೇಟೆ ನಿವಾಸಿಗಳಾದ ವಿನಯ್ ಮತ್ತು ಗಣೇಶ್ ಎಂಬುವವರಿಗೆ ಗಾಯಗಳಾಗಿ, ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಆರೋಪಿಗಳು ಕಲ್ಲು ತೂರಾಟ ಮಾಡುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಸ್ಥಳೀಯರು ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಗಳು, ಹಳೆ ದ್ವೇಷದ ಹಿನ್ನಲೆಯಲ್ಲಿ ಕಲ್ಲು ತೂರಿದ್ದಾಗಿ ಹೇಳಿಕೊಂಡಿದ್ದಾರೆ.ತಮ್ಮ ಏರಿಯಾ ಮೂಲಕ ಗಣೇಶ ಮೆರವಣಿಗೆ ಮಾಡಬಾರದು ಎಂದು ಗಾಯಾಳುಗಳಾಗಿರುವ ವಿನಯ್ ಮತ್ತು ಗಣೇಶ್ ಜೊತೆ ಜಗಳ ಮಾಡಿದ್ದರು. ಇದೇ ಕಾರಣಕ್ಕೆ ಇದೀಗ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


