Friday, November 6, 2026
spot_img
More
    spot_img
    HomeLatest newsಬಿಹಾರದಲ್ಲಿ ದಾಖಲೆಯ ಮತದಾನ: ಗೆಲುವಿನ ಲೆಕ್ಕಾಚಾರ ಎಲ್ಲಾ ಬದಲು!

    ಬಿಹಾರದಲ್ಲಿ ದಾಖಲೆಯ ಮತದಾನ: ಗೆಲುವಿನ ಲೆಕ್ಕಾಚಾರ ಎಲ್ಲಾ ಬದಲು!

    ಬಿಹಾರದ ವಿಧಾನಸಭೆ ಚುನಾವಣೆ 2025ರ ಮತದಾನ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆದಿದ್ದು, ದಾಖಲೆಯ ಮತದಾನವಾಗಿದೆ. 121 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, 2ನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಘೋಷಣೆಯಾಗಲಿದೆ.

    ಬಿಹಾರದಲ್ಲಿ ದಾಖಲೆಯ ಮತದಾನ ನಡೆದಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಶೇ 64.66ರಷ್ಟು ಮತದಾನವಾಗಿದೆ. ಈ ಮೂಲಕ 2000ದಲ್ಲಿ ನಡೆದಿದ್ದ ಶೇ 62.57ರ ದಾಖಲೆ ಅಳಿಸಿ ಹೋಗಿದೆ.

    ಆರ್‌ಜೆಡಿ ನಾಯಕ, ಮಹಾಘಟಬಂಧನ್ ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಸೇರಿದಂತೆ ಹಲವು ನಾಯಕರ ಭವಿಷ್ಯ ಮತಯಂತ್ರ ಸೇರಿದೆ. ಹಲವು ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆದಿದೆ. ಕೆಲವು ಕಡೆ ಬಿಜೆಪಿ ಮತ್ತು ಆರ್‌ಜೆಡಿ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿದೆ.

    ದಾಖಲೆಯ ಮತದಾನ: ಬಿಹಾರ ಮತದಾನದ ಕುರಿತು ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ‘ಬಿಹಾರದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗಿರುವುದು ಪ್ರಜಾಪ್ರಭುತ್ವದ ಗೆಲುವು” ಎಂದು ಹೇಳಿದರು.

    “ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಶೂನ್ಯ ಆಕ್ಷೇಪಣೆ ಸಲ್ಲಿಕೆಯಾಗಿದೆ. ಇದರ ಜೊತೆಗೆ 1951ರಿಂದ ಮೊದಲ ಬಾರಿಗೆ ಅತಿ ಹೆಚ್ಚು ಮತದಾನವಾಗಿದೆ. ಪಾರದರ್ಶಕ ಚುನಾವಣಾ ವ್ಯವಸ್ಥೆಗಳ ಮೂಲಕ ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂದು ತಿಳಿಸಿದರು.

    ಮತದಾನ ಪ್ರಮಾಣ ವಿವರ

    • 1951-52 – ಶೇ 42.6 ಅತಿ ಕಡಿಮೆ
    • 1998 – ಶೇ 62.57
    • 2025 (1ನೇ ಹಂತ) – ಶೇ 64.66

    ಬಿಹಾರದಲ್ಲಿ 1990 (62.04), 1995 (61.79) ಹೊರತುಪಡಿಸಿದರೆ ಬೇರೆ ಯಾವುದೇ ಚುನಾವಣೆಗಳಲ್ಲಿಯೂ ಮತದಾನ ಪ್ರಮಾಣ ಶೇ 60 ದಾಟಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ 1998ರಲ್ಲಿ ಶೇ 64.6ರಷ್ಟು ಮತದಾನವಾಗಿದ್ದು ಅತಿ ಹೆಚ್ಚಿನ ಮತದಾನ ಪ್ರಮಾಣವಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಶೇ 56.28ರಷ್ಟು ಮತದಾನವಾಗಿತ್ತು.

    ರಾಜ್ಯದ 122 ಕ್ಷೇತ್ರಗಳಿಗೆ ನವೆಂಬರ್ 11ರಂದು ಮತದಾನ ನಡೆಯಲಿದೆ. ಅಂದು ಸಂಜೆ ವಿವಿಧ ಸಂಸ್ಥೆಗಳು ನಡೆಸಿದ ಎಕ್ಸಿಟ್ ಫೋಲ್ ಫಲಿತಾಂಶ ಸಹ ಪ್ರಕಟವಾಗಲಿದೆ. ಮೊದಲ ಹಂತದ ದಾಖಲೆಯ ಮತದಾನ ರಾಜಕೀಯ ಪಕ್ಷಗಳ ಚುನಾವಣಾ ಸೋಲು ಗೆಲುವಿನ ಲೆಕ್ಕಾಚಾರವನ್ನು ಬದಲಾವಣೆ ಮಾಡಿವೆ.

    ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮತ್ತು ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಎದುರಾಳಿಗಳು. ಉಳಿದಂತೆ ಪ್ರಶಾಂಶ್ ಕಿಶೋರ್ ನೇತೃತ್ವದ ಜನ್ ಸುರಾಜ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ.

    ಬಿಜೆಪಿ-ಜೆಡಿಯು ಮೈತ್ರಿಕೂಟ ಈ ಬಾರಿಯೂ ಗೆಲುವು ಸಾಧಿಸುವ ಮೂಲಕ 5ನೇ ಬಾರಿಗೆ ಅಧಿಕಾರವನ್ನು ಪಡೆಯುವ ಉತ್ಸಾಹದಲ್ಲಿದೆ. ಆದರೆ ಆಡಳಿತ ವಿರೋಧಿ ಅಲೆ, ಮೈತ್ರಿಕೂಟದ ಭಿನ್ನಾಭಿಪ್ರಾಯಗಳ ಕಾರಣ ಎನ್‌ಡಿಎ ಸೋಲಲಿದೆ. ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ ಎಂಬುದು ವಿಶ್ಲೇಷಣೆಯಾಗಿದೆ.

    ಚುನಾವಣಾ ಪೂರ್ವ ಸಮೀಕ್ಷೆಗಳು ಎನ್‌ಡಿಎ ಅಧಿಕಾರಕ್ಕೆ ಬರದಲಿದೆ. ಆದರೆ ತೀವ್ರ ಪೈಪೋಟಿ ಇರಲಿದೆ ಎಂದು ಅಂದಾಜಿಸಿವೆ. ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ದೇಶವೇ ಎದುರು ನೋಡುತ್ತಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಮತಗಳ್ಳತನ ಆರೋಪದ ಬಳಿಕ ನಡೆಯುತ್ತಿರುವ ಮೊದಲ ರಾಜ್ಯದ ವಿಧಾನಸಭೆ ಚುನಾವಣೆ ಇದಾಗಿದೆ.

    ಎನ್‌ಡಿಎ ಮೈತ್ರಿಕೂಟ ಸಿಎಂ ಅಭ್ಯರ್ಥಿ ಘೋಷಣೆ ಮಾಡದೇ ಚುನಾವಣೆ ಎದುರಿಸುತ್ತಿದೆ. ಒಂದು ವೇಳೆ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಅವರನ್ನು ಸಿಎಂ ಮಾಡುವುದಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಯಾರಿಗೆ ಅಧಿಕಾರ? ಎಂದು ತಿಳಿಯಲು ನವೆಂಬರ್ 14ರ ತನಕ ಕಾಯಬೇಕಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search