Monday, September 21, 2026
spot_img
More
    spot_img
    HomeJobsಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಅಪ್‌ಡೇಟ್: ಶಿಮುಲ್ ಎಲ್ಲಾ ನೇಮಕಾತಿ ರದ್ದು

    ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಅಪ್‌ಡೇಟ್: ಶಿಮುಲ್ ಎಲ್ಲಾ ನೇಮಕಾತಿ ರದ್ದು

    ಉದ್ಯೋಗಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಅಪ್‌ಡೇಟ್ ಮಾಹಿತಿ ಒಂದಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಸಂಘಗಳ ಒಕ್ಕೂಟವನ್ನು (ಶಿಮುಲ್) ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸಿ ಆದೇಶಿಸಿದೆ.

    Advertisement

    ಈ ಕುರಿತು ಶಿಮುಲ್ ವ್ಯವಸ್ಥಾಪಕರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ನೇಮಕಾರಿ ಪ್ರಕಟಣೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು (ಬ್ಯಾಂಕ್ ಶುಲ್ಕ ಹೊರತುಪಡಿಸಿ) ವಾಪಸ್ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಪ್ರಕಟಣೆಯ ವಿವರಗಳು: ವ್ಯವಸ್ಥಾಪಕ ನಿರ್ದೇಶಕರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಮಾಚೇನಹಳ್ಳಿ, ನಿದಿಗೆ(ಅಂಚೆ), ಶಿವಮೊಗ್ಗ-577 222 ಪ್ರಕಟಣೆಯನ್ನು ಹೊರಡಿಸಿದ್ದಾರೆ. ಈ ಪ್ರಕಟಣೆ ನೇಮಕಾತಿ ಪ್ರಕಟಣೆಗಳ ರದ್ಧತಿ ಎಂಬ ವಿಷಯವನ್ನು ಒಳಗೊಂಡಿದೆ.

    ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., (ಶಿಮುಲ್) ಶಿವಮೊಗ್ಗ ಇದರ ವಿವಿಧ ವೃಂದಗಳಲ್ಲಿ ಖಾಲಿ ಇರುವ ಒಟ್ಟು 194 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ನೇಮಕಾತಿ ಪ್ರಕಟಣೆ ಸಂಖ್ಯೆ.ಶಿಮುಲ್/ಆಡಳಿತ-1/ನೇ.ನೇ- 370/9359/2022-23 ದಿನಾಂಕ: 31.01.2023 ಮತ್ತು ನೇಮಕಾತಿ ತಿದ್ದುಪಡಿ ಪ್ರಕಟಣೆ ಸಂಖ್ಯೆ.ಶಿಮುಲ್ /ಆಡಳಿತ-1 /ನೇ.ನೇ-370/2982/2025-26 ದಿನಾಂಕ: 28.08.2025ಗಳನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿರುವುದು ಸರಿಯಷ್ಟೇ.

    ಆದರೆ ದಿನಾಂಕ: 28.10.2024 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ Do: 28.10.2024 ರ ನಂತರ ಸರ್ಕಾರದ ಯಾವುದೇ ಇಲಾಖೆ/ ಮಂಡಳಿ/ ನಿಗಮ/ ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಬೇಕು ಎಂದು ಸೂಚಿಸಲಾಗಿತ್ತು.

    ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದು ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 388 ಸೆನೆನಿ 2024 ಭಾ-3 ದಿನಾಂಕ: 04.09.2025 ರಲ್ಲಿ ಸೂಚಿಸಿರುವ ಹಿನ್ನೆಲೆಯಲ್ಲಿ ಒಕ್ಕೂಟವು ದಿನಾಂಕ: 31.01.2023 28.08.2025ರ ಕ್ರಮವಾಗಿ ಹೊರಡಿಸಲಾಗಿರುವ ನೇಮಕಾತಿ ಪ್ರಕಟಣೆ ಮತ್ತು ನೇಮಕಾತಿ ತಿದ್ದುಪಡಿ ಪ್ರಕಟಣೆಗಳನ್ನು ಈ ಮೂಲಕ ರದ್ದುಗೊಳಿಸಲಾಗಿದೆ.

    ಸದರಿ ನೇಮಕಾತಿ ಪ್ರಕಟಣೆಗಳಿಗೆ ಪ್ರತಿಕ್ರಿಯಿಸಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು (ಬ್ಯಾಂಕ್ ಶುಲ್ಕ ಹೊರತುಪಡಿಸಿ) ಪಾವತಿಸಲು ಬಳಸಿದ ಬ್ಯಾಂಕ್ ಖಾತೆಗಳಿಗೆ ಹಿಂದಿರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

    194 ಹುದ್ದೆಗಳ ಈ ನೇಮಕಾತಿಯಲ್ಲಿ ಶಿಮುಲ್ ಸಹಾಯಕ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ (ಆಡಳಿತ), ಮಾರುಕಟ್ಟೆ ಅಧಿಕಾರಿ, ತಾಂತ್ರಿಕ ಅಭಿಯಂತರ, ತಾಂತ್ರಿಕ ಅಧಿಕಾರಿ, ಕೆಮಿಸ್ಟ್ ದರ್ಜೆ, ವಿಸ್ತರಣಾಧಿಕಾರಿ, ಮಾರುಕಟ್ಟೆ ಸಹಾಯಕ, ಕಿರಿಯ ಸಿಸ್ಟಂ ಆಪರೇಟರ್, ಶೀಘ್ರಲಿಪಿಗಾರ, ಕಿರಿಯ ತಾಂತ್ರಿಕ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು.

    ಎಸ್‌ಎಸ್‌ಎಲ್‌ಸಿ/ ಪಿಯುಸಿ/ ಪದವಿ/ ಡಿಪ್ಲೊಮಾ/ ಬಿಇ ಪದವಿ ಪಡೆದ ನೂರಾರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿ, ಮುಂದಿನ ಪ್ರಕ್ರಿಯೆಗಾಗಿ ಕಾಯುತ್ತಿದ್ದರು. ಆದರೆ ಈಗ ನೇಮಕಾತಿ ಅಧಿಸೂಚನೆ ರದ್ದುಗೊಳಿಸಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading