Friday, November 6, 2026
spot_img
More
    spot_img
    HomeLatest newsಜಾತಿಗಣತಿ: ರಾಜ್ಯ, ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ ಗೌರವಧನ ಎಷ್ಟು?

    ಜಾತಿಗಣತಿ: ರಾಜ್ಯ, ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ ಗೌರವಧನ ಎಷ್ಟು?

    ಕರ್ನಾಟಕ ಸರ್ಕಾರ ಕೈಗೊಂಡಿದ್ದ ಜಾತಿಗಣತಿ ಅಥವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಅಂತ್ಯಗೊಂಡಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಸಮೀಕ್ಷಾದಾರರಿಗೆ ತರಬೇತಿ ನೀಡಿರುವ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಆದೇಶಿಸಲಾಗಿದೆ.

    ಈ ಕುರಿತು ಕೆ.ಎ.ದಯಾನಂದ, ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರು ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮೀಕ್ಷಾದಾರರಿಗೆ ತರಬೇತಿ ನೀಡಿರುವ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

    ಪ್ರಸ್ತಾವನೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ. ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

    ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ತರಬೇತಿ ನೀಡುವ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ.
    ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಗೌರವಧನ/ ಸಂಭಾವನೆ ರೂ. 7,500. ರಾಜ್ಯಮಟ್ಟದ ಮಾಸ್ಟರ್ ಟ್ರೈನರ್‌ಗಳು ಜಿಲ್ಲಾಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ತರಬೇತಿ ನೀಡಿದ್ದಾರೆ.

    ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ರೂ. 5,000 ಗೌರವಧನ/ ಸಂಭಾವನೆ. ತಲಾ 50 ಸಮೀಕ್ಷಾದಾರರಿಗೆ 2 ಬಾರಿ ಜಿಲ್ಲಾಮಟ್ಟದ ಮಾಸ್ಟರ್ ಟ್ರೈನರ್‌ಗಳು ತರಬೇತಿ ನೀಡಿದ್ದಾರೆ. ಜಿಲ್ಲಾಮಟ್ಟದ ಒಟ್ಟು ಮಾಸ್ಟರ್ ಟ್ರೈನರ್‌ಗಳು 2,563. ಒಟ್ಟು ಬಿಡುಗಡೆಯಾದ ಅನುದಾನ 1,28,15,000 ರೂ.ಗಳು. ರಾಜ್ಯಮಟ್ಟದ ಟ್ರೈನರ್‌ಗಳು 168. ಬಿಡುಗಡೆಯಾದ ಅನುದಾನ 12,60,000 ರೂ.ಗಳು.

    ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ತರಬೇತಿ ನೀಡಿರುವ ರಾಜ್ಯ ಮಟ್ಟದ 168 ಮತ್ತು ಜಿಲ್ಲಾ ಮಟ್ಟದ 2,563 ಒಟ್ಟು 2,731 ಮಾಸ್ಟರ್ ಟ್ರೈನರ್ಸ್ ಗಳ ಜಿಲ್ಲಾವಾರು ಸಂಖ್ಯಾ ವಿವರವನ್ನು ಸಲ್ಲಿಸಿ ಗೌರವ ಧನ ಪಾವತಿಸುವಂತೆ ಎಲ್ಲಾ ಜಿಲ್ಲೆಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ, ಮಾಸ್ಟರ್ ಟ್ರೈನರ್ಸ್ ಗಳಿಗೆ ಗೌರವ ಧನ ಪಾವತಿಸಲು ಒಟ್ಟು ರೂ.1,40,75,000ಗಳನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ತೀರ್ಮಾನಿಸಿದೆ. ಅದರಂತೆ ಈ ಆದೇಶಿಸಲಾಗಿದೆ.

    ಆದೇಶದ ವಿವರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ತರಬೇತಿ ನೀಡಿರುವ ರಾಜ್ಯ ಮಟ್ಟದ 168 ಮತ್ತು ಜಿಲ್ಲಾ ಮಟ್ಟದ 2,563 ಒಟ್ಟು 2,731 ಮಾಸ್ಟರ್ ಟ್ರೈನರ್ಸ್ ಗಳಿಗೆ ಅನುಕ್ರಮವಾಗಿ ತಲಾ ರೂ.7,500 ಮತ್ತು ರೂ.5,000ಗಳಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ.1,40,75,000 ಜಿಲ್ಲಾಧಿಕಾರಿಗಳ ಪಿ.ಡಿಖಾತೆಗೆ ಬಿಡುಗಡೆ ಮಾಡಿ ಆದೇಶಿಸಿದೆ.

    • ಬಿಡುಗಡೆ ಮಾಡಿರುವ ಅನುದಾನವನ್ನು ಮಾಸ್ಟರ್ ಟ್ರೈನರ್ಸ್ ಗಳಿಗೆ ಗೌರವ ಧನ ಪಾವತಿಸಲು ಮಾತ್ರ ವಿನಿಯೋಗಿಸುವುದು.
    • ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.
    • ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search