Tuesday, November 3, 2026
spot_img
More
    spot_img
    HomeEntertainmentಹಾಲಿವುಡ್‌ ಹೆಸರಾಂತ ಗ್ರಾಫಿಕ್ಸ್‌ ತಂತ್ರಜ್ಞರ ಜತೆ ಕೈ ಜೋಡಿಸಿದ ಅರ್ಜುನ್‌ ಜನ್ಯ

    ಹಾಲಿವುಡ್‌ ಹೆಸರಾಂತ ಗ್ರಾಫಿಕ್ಸ್‌ ತಂತ್ರಜ್ಞರ ಜತೆ ಕೈ ಜೋಡಿಸಿದ ಅರ್ಜುನ್‌ ಜನ್ಯ

    ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ MARZ ಸಂಸ್ಥೆಯು ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ.

    ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್‍ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್‍ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘45’ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದ್ದವು. ಇದೀಗ ಚಿತ್ರಕ್ಕೆ VFX ಕೆಲಸ ಶುರುವಾಗಿದ್ದು, ಅದಕ್ಕಾಗಿ ಟೊರೊಂಟೋದ ಖ್ಯಾತ VFX ಸಂಸ್ಥೆಯಾದ MARZನ ಮೊರೆ ಹೋಗಿದ್ದಾರೆ ನಿರ್ದೇಶಕ ಅರ್ಜುನ್‍ ಜನ್ಯ.

    ಹಾಲಿವುಡ್‍ನ 150 ಕ್ಕೂ ಅಧಿಕ ಚಿತ್ರಗಳಿಗೆ ಗ್ರಾಫಿಕ್ಸ್ ಕೆಲಸ ಮಾಡಿ ,ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಟೊರೊಂಟೊದ MARZ’ ಸಂಸ್ಥೆಯು ‘45’ ಚಿತ್ರದ VFX ಕೆಲಸ ಮಾಡುತ್ತಿದೆ. ಇದು ಈ ಸಂಸ್ಥೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ ಮಾಡುತ್ತಿರುವ ಭಾರತದ ಮೊದಲ ಚಿತ್ರ. ಈ ಸಂಸ್ಥೆಯ ರಾಫೆಲ್ ಹಾಗೂ ಜಸ್ಟಿನ್ ಅವರ ನೇತೃತ್ವದಲ್ಲಿ ಗ್ರಾಫಿಕ್ಸ್ ಕಾರ್ಯ ನಡೆಯುತ್ತಿದೆ. ಇತ್ತೀಚಿಗೆ ಈ ಚಿತ್ರದ ಗ್ರಾಫಿಕ್ಸ್ ಕೆಲಸದ ನಿಮಿತ್ತವಾಗಿ ಟೊರಾಂಟೋದ MARZ ಸಂಸ್ಥೆಗೆ ಅರ್ಜುನ್‍ ಜನ್ಯ ಭೇಟಿ ನೀಡಿದ್ದಾರೆ.

    ಚಿತ್ರದ ಕುರಿತು ಮಾತನಾಡುವ ಅರ್ಜುನ್‍ ಜನ್ಯ, ‘ಈ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರರಿದ್ದ ಹಾಗೆ. ರಮೇಶ್ ರೆಡ್ಡಿ ಈ ಮೂವರನ್ನು ಇಟ್ಟುಕೊಂಡು ಒಂದು ದೇವಸ್ಥಾನ ಕಟ್ಟಿಸಿದ್ದಾರೆ. ಸತ್ಯ ಹೆಗಡೆ ಈ ದೇವಸ್ಥಾನದ ಪ್ರಧಾನ ಅರ್ಚಕರು. ಇವರೆಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ’ ಎಂದು ಹೇಳಿದ್ದರು.

    ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search