Sunday, September 20, 2026
spot_img
More
    spot_img
    HomeStateಕಾಂಗ್ರೆಸ್‌ ರೋಗಗ್ರಸ್ತ ಸರ್ಕಾರ: ರಾಜ್ಯದಲ್ಲಿ ಈ ವರ್ಷ 327 ಬಾಣಂತಿಯರ ಸಾವು; ಎಚ್‌ಡಿಕೆ ಕಿಡಿ

    ಕಾಂಗ್ರೆಸ್‌ ರೋಗಗ್ರಸ್ತ ಸರ್ಕಾರ: ರಾಜ್ಯದಲ್ಲಿ ಈ ವರ್ಷ 327 ಬಾಣಂತಿಯರ ಸಾವು; ಎಚ್‌ಡಿಕೆ ಕಿಡಿ

    ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಐವರು ಬಾಣಂತಿಯರ ಸರಣಿ ಸಾವು ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೀಡಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಕುರಿತು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆಗೈಯುತ್ತಿವೆ.

    Advertisement

    ಸದ್ಯ ಈ ಕುರಿತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಈ ವರ್ಷ ರಾಜ್ಯದಲ್ಲಿ 327 ಬಾಣಂತಿಯರು ಸಾವನ್ನಪ್ಪಿದ್ದಾರೆ, ಕಾಂಗ್ರೆಸ್‌ ಸರ್ಕಾರ ರೋಗಗ್ರಸ್ತ ಸರ್ಕಾರ ಎಂದು ಕಿಡಿಕಾರಿದ್ದಾರೆ.

    ಎಚ್‌ಡಿಕೆ ಪೋಸ್ಟ್‌ನಲ್ಲೇನಿದೆ?
    “ಸ್ವತಃ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ.

    ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ @INCKarnataka ಸರಕಾರ; ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ!! ಇದೇನಾ ಮಹಿಳೆಯರ ಸಬಲೀಕರಣ?

    ರಾಜ್ಯದಲ್ಲಿ ಸರಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು?

    ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ?

    ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ.

    ಈ ಮರಣಗಳಿಂದ ಸರಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್’ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು” ಎಂದು ಆಗ್ರಹಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading