ಪ್ರಸ್ತುತ ನಡೆಯುತ್ತಿರುವ ಆಶಸ್ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲೂ ಸಹ ಆಸ್ಟ್ರೇಲಿಯಾ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯಲ್ಲಿ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ಬ್ರಿಸ್ಬೇನ್‌ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 334 ರನ್‌ಗೆ ಆಲ್‌ಔಟ್ ಆದರೆ, ಆಸ್ಟ್ರೇಲಿಯಾ 511 ರನ್‌ಗೆ ಆಲ್‌ಔಟ್ ಆಗಿ ಮೊದಲ ಇನ್ನಿಂಗ್ಸ್‌ನಲ್ಲಿ 177 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು.
ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ಹಿನ್ನಡೆ ಅನುಭವಿಸಿದ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 241 ರನ್‌ಗೆ ಆಲ್‌ಔಟ್ ಆಗಿ ಆಸ್ಟ್ರೇಲಿಯಾಗೆ 64 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಆಸ್ಟ್ರೇಲಿಯಾ 2 ವಿಕೆಟ್‌ಗೆ 69 ರನ್ ಬಾರಿಸಿ 8 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.
ಈ ಸೋಲಿನ ಮೂಲಕ ಇಂಗ್ಲೆಂಡ್ ಆಸ್ಟ್ರೇಲಿಯಾದಲ್ಲಿ ಸತತ 17 ಟೆಸ್ಟ್ ಸೋಲುಗಳನ್ನು ಕಂಡಿದೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಸತತ ಅತಿಹೆಚ್ಚು ಟೆಸ್ಟ್ ಸೋಲಿನ ಕೆಟ್ಟ ದಾಖಲೆಯಲ್ಲಿ ಪಾಕಿಸ್ತಾನ ತಂಡವನ್ನು ಸರಿದೂಗಿಸಿದೆ. ಪಾಕಿಸ್ತಾನ ಸಹ ಆಸ್ಟ್ರೇಲಿಯಾ ನೆಲದಲ್ಲಿ ಸತತ 17 ಟೆಸ್ಟ್ ಪಂದ್ಯಗಳನ್ನು ಸೋತಿದೆ.
ಆದರೆ ಇಂಗ್ಲೆಂಡ್ ಕೊನೆಯದಾಗಿ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದದ್ದು 2011ರಲ್ಲಿ ಹಾಗೂ ಪಾಕಿಸ್ತಾನ ಕೊನೆಯದಾಗಿ ಆಸ್ಟ್ರೇಲಿಯಾದಲ್ಲಿ ಕೊನೆಯ ಬಾರಿಗೆ ಟೆಸ್ಟ್ ಗೆದ್ದದ್ದು 1995ರಲ್ಲಿ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


