ಬೆಂಗಳೂರು ;ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಆದಾಯ ಮೀರಿದ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಬೆಳ್ಳಂ ಬೆಳಗ್ಗೆ ಸುಖವಾಗಿ ನಿದ್ದೆ ಮಾಡುತ್ತಿದ್ದ ಅಧಿಕಾರಿಗಳ ಮನೆ ಬಾಗಿಲು ತಟ್ಟಿ, ಬಿಸಿ ಮುಟ್ಟಿಸಿದ್ದಾರೆ. ಎಲ್ಲಿಲ್ಲೆ ಯಾವ ಅಧಿಕಾರಿಗಳಿಗೆ ಲೋಕಾ ಶಾಕ್ ನೀಡಿದೆ ಎಂದು ನೋಡುವದಾದ್ರೆ. ಬಳ್ಳಾರಿ, ಗದಗ , ಬೆಂಗಳೂರು, ಚಿಕ್ಕಮಗಳೂರು ಸೇರಿ .ಬಳ್ಳಾರಿ ಮತ್ತು ಗದಗ್ ಸೇರಿದಂತೆ ರಾಜ್ಯದ 8 ಕಡೆ ಸರ್ಕಾರಿ ಅಧಿಕಾರಿಗಳ ನಿವಾಸ ಮೇಲೆ ದಾಳಿ ನಡೆಸಿದೆ. ದಾಳಿ ಇನ್ನೂ ಮುಂದುವರಿದಿದ್ದು, ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ ದಾಳಿ ನಡೆದಿದೆ.
ಗದಗ -ಬೆಟಗೇರಿ ನಗರಸಭೆ ಇಂಜಿನಿಯರ್ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್(Executive Engineer) ಹುಚ್ಚೇಶ್ ಬಂಡಿವಡ್ಡರ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕಚೇರಿ, ತೋಟದ ಮನೆ ಮೇಲೆ ದಾಳಿ ನಡೆದಿದೆ. ಗದಗ, ಗಜೇಂದ್ರಗಢ, ಬಾಗಲಕೋಟೆ ಸೇರಿದಂತೆ 5 ಕಡೆ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ಎಸ್‌ಪಿ ಹನುಮಂತರಾಯಪ್ಪ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ನಗರದ ಲಕ್ಷ್ಮೀಟೆಕ್ನಲ್ಲಿರುವ ಪ್ರಕಾಶ್ ನಿವಾಸ, ತಹಶೀಲ್ದಾರ್ ಕಚೇರಿ, ನಿಪ್ಪಾಣಿಯ ನಿವಾಸ ಸೇರಿ 6 ಕಡೆ ದಾಳಿ ನಡೆದಿದೆ
ಬಳ್ಳಾರಿ ರಾಮಾಂಜನೇಯ ನಗರದಲ್ಲಿರುವ ತಾಲೂಕು BCM ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ತನಿಖೆ(Investigestion) ನಡೆಸಿದ್ದಾರೆ. ಲೋಕೇಶ್ ನಿವಾಸ ಅವರ ಸಂಬಂಧಿಕರು, ಸ್ನೇಹಿತರ ನಿವಾಸಗಳ ಮೇಲೆಯೂ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿನಡೆಸಿದ್ದು, ಕಡೂರು ಆಡಳಿತ ವೈದ್ಯಾಧಿಕಾರಿ ಉಮೇಶ್ ನಿವಾಸ, ಸ್ನೇಹಿತರು, ಹಾಗೂ ಸಂಬಂಧಿಕರ ಮನೆಗಳ ಮೇಲೆ ಅಧಿಕಾರಿಗಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ಸದ್ಯ ಲೋಕೇಶ್ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಲೋಕಾಯುಕ್ತ ಎಸ್‌ಪಿ ಹನಂಮತರಾಯ್, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


