Friday, August 7, 2026
spot_img
More
    spot_img
    HomeTop Storyನೋಡನೋಡುತ್ತಿದ್ದಂತೆ ವ್ಯಕ್ತಿಯನ್ನು ಎಳೆದು ಬಿಸಾಡಿದ ಆನೆ; ವಿಡಿಯೊ ವೈರಲ್

    ನೋಡನೋಡುತ್ತಿದ್ದಂತೆ ವ್ಯಕ್ತಿಯನ್ನು ಎಳೆದು ಬಿಸಾಡಿದ ಆನೆ; ವಿಡಿಯೊ ವೈರಲ್

    ಮಲಪ್ಪುರಂ(ಕೇರಳ): ಇಲ್ಲಿ ನಡೆದ ಪುತಿಯಂಗಡಿ ‘ನೆರ್ಚಾ’ ಎಂಬ ಧಾರ್ಮಿಕ ಕಾರ್ಯಕ್ರಮದ ವೇಳೆ ಆನೆಯೊಂದು ದಾಳಿ ಮಾಡಿದ್ದರಿಂದ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮುಂಜಾನೆ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ನಡೆಯಿತು.‌ ಸದ್ಯ ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

    Advertisement


    ಧಾರ್ಮಿಕ ಕಾರ್ಯಕ್ರಮದಲ್ಲಿ ಐದು ಆನೆಗಳು ಭಾಗಿಯಾಗಿದ್ದವು. ಈ ಪೈಕಿ ಪಾಕತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ, ಸೊಂಡಿಲಿನಿಂದ ಎಳೆದು ಬಿಸಾಡಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೊಟ್ಟಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.


    ಘಟನೆಯಿಂದ ಗಾಬರಿಗೊಂಡ ಜನರು ಓಡಲು ಪ್ರಾರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.


    ದೇವಸ್ಥಾನದಲ್ಲಿ ಆನೆ ತುಳಿದು ಮಾವುತ ಸಾವು: ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರ ಕರಿಸಿದ್ದೇಶ್ವಸರ ದೇವಸ್ಥಾನದ ಧೃವ ಎಂಬ ಆನೆ ದಾಳಿಯಿಂದ ಮಾವುತ ಮೃತಪಟ್ಟಿದ್ದರು. ಅಲಖನೂರ ಗ್ರಾಮದ ಧರೆಪ್ಪ ಭೇವನೂರ (28) ಮೃತರು. ಮೇವು ಹಾಕಲು ಬಂದ ಮಾವುತನನ್ನು ಆನೆ ತುಳಿದಿತ್ತು. ಮದವೇರಿದ ಸಂದರ್ಭದಲ್ಲಿ ಮೇವು ಹಾಕಲು ಬಂದ ಮಾವುತನ ಮೇಲೆ ದಾಳಿ ಮಾಡಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading