ನಿರ್ದೇಶಕ ದಿನಕರ್ ತೂಗುದೀಪ ನಿರ್ದೇಶನದ ನವಗ್ರಹ ಚಿತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ನಿನ್ನೆ (ಫೆಬ್ರವರಿ 7) ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಗಿರಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಗಿರಿ ದಿನೇಶ್ ನವಗ್ರಹ ಚಿತ್ರದಿಂದ ಫೇಮಸ್ ಆಗಿದ್ದರು. ಇನ್ನು ಗಿರಿ ದಿನೇಶ್ ಅವರಿಗೆ 45 ವರ್ಷ ವಯಸ್ಸಾಗಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


