ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಕುರಿತು ಮಹತ್ವದ ಅಪ್‌ಡೇಟ್ ನೀಡಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿದ್ದ ಸಂದರ್ಭ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಅರ್ಜಿ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆ ಮಾಡುವಂತೆ ಕೋರಿದ್ದರು.ದಿನಾಂಕ 20-0-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಕೃಷಿ ಇಲಾಖೆಯಲ್ಲಿ 128 ಕೃಷಿ ಅಧಿಕಾರಿ ಹುದ್ದೆಗೆ ಹಾಗೂ 817 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು 03-01-2025 ರಿಂದ 01-02-2025 ರವರೆಗೆ ಜಾರಿ ಮಾಡಲಾಗಿತ್ತು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದ ಹಿನ್ನೆಲೆ ಕೆಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಮಯ ವಿಸ್ತರಿಸುವಂತೆ ಕೋರಿಕೊಂಡಿದ್ದರು. ಆದ್ದರಿಂದ ಅಭ್ಯರ್ಥಿಗಳ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ ಮತ್ತು ಕೊನೆಯ ದಿನಾಂಕಗಳನ್ನು 05-02-2025 ರಿಂದ 15-02-2025ರವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ.ಅದೇ ರೀತಿ ವಿದ್ಯಾರ್ಹತೆ, ಮೀಸಲಾತಿ, ಅರ್ಜಿ ಶುಲ್ಕ, ವಯೋಮಿತಿ, ಇತ್ಯಾದಿ ವಿವರಗಳಲ್ಲಿ ಯಾವುದೇ ಬದಲಾವಣೆಗಳು ಇರುವದಿಲ್ಲ.
ಅರ್ಜಿ ಪ್ರಕ್ರಿಯೆಗೆ ನಿಗದಿತ ದಿನಾಂಕಗಳು
ಅಧಿಸೂಚನೆ ಬಿಡುಗಡೆ ಆದ ದಿನಾಂಕ 20-09-2024
ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ 03-01-2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-02-2025
ಅರ್ಜಿ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆ ; 05-02-2025 ರಿಂದ 15-02-2025
ಹುದ್ದೆಗಳ ವರ್ಗೀಕರಣ ಮಾಹಿತಿ
ಕೃಷಿ ಅಧಿಕಾರಿಗಳು 86 RPC + 42HK :128 ಒಟ್ಟು
ಸಹಾಯಕ ಕೃಷಿ ಅಧಿಕಾರಿಗಳು 586 RPC + 231 HK : 817 ಒಟ್ಟು
ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ 945
ಕೃಷಿ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೇ.85 ಹುದ್ದೆಗಳಿಗೆ ಬಿಎಸ್‌ಸಿ (ಕೃಷಿ) ಅಥವಾ ಬಿಎಸ್‌ಸಿ (ಆನರ್ಸ್) ಕೃಷಿ ಪದವಿ ಪಡೆದಿರಬೇಕು. ಶೇ15 ಹುದ್ದೆಗಳಿಗೆ ಬಿ.ಟೆಕ್ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ, ಆಹಾರ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಅಗ್ರಿಕಲ್ಬರಲ್ ಇಂಜಿನಿಯರ್ ಪದವಿ ಪಡೆದಿರಬೇಕು.
ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ ವಿವರ
ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ : Rs.43,100-83,900.
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ : Rs.40,900- 78,200.
ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು.
ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 38 ವರ್ಷಗಳು
ಪ್ರವರ್ಗ 2ಎ/ 2ಬಿ/ 3ಎ/ 3ಬಿ 41 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷಗಳು.
ಕೃಷಿ ಇಲಾಖೆ ಹುದ್ದೆಗಳಿಗೆ ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು.
ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಮನವಿಗಳನ್ನು ತಿರಸ್ಕರಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ, ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ,
ಭಾವಚಿತ್ರ/ ಸಹಿ/ ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
ನಂತರ ಶುಲ್ಕವನ್ನು ಪಾವತಿಸಬೇಕು.ನೋಟಿಫಿಕೇಶನ್ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html ವೆಬ್‌ಸೈಟ್‌ಗೆ ಭೇಟಿ ನೀಡಿರಿ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


