ನವದೆಹಲಿ: ಇಂದು (ಫೆಬ್ರವರಿ 8) ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭದಿಂದಲೇ ಬಿಜೆಪಿ ಹಾಗೂ ಎಎಪಿ ನಡುವೆ ನೇರಾನೇರ ಪೈಪೋಟಿ ಏರ್ಪಟ್ಟಿದೆ.
8.20ರ ಸಮಯಕ್ಕೆ 70 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳ ಮತ ಎಣಿಕೆಯ ಅಪ್‌ಡೇಟ್ ದೊರಕಿದ್ದು, ಈ ಪೈಕಿ 14 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಎಎಪಿ 12 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ ಹಾಗೂ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಕಲ್ಕಾಜಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ದೆಹಲಿಯ ಮುಖ್ಯಮಂತ್ರಿ ಅತಿಶಿ ಹಿನ್ನಡೆ ಅನುಭವಿಸಿದ್ದು, ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅರವಿಂದ್ ಕೇಜ್ರಿವಾಲ್ ಸಹ ಹಿನ್ನಡೆ ಅನುಭವಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


