ನವದೆಹಲಿ: ನವದೆಹಲಿ: ಇಂದು (ಫೆಬ್ರವರಿ 8) ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮುನ್ನಡೆ ಸಾಧಿಸಿದ್ದು, ಗೆಲುವು ಬಹುತೇಕ ಖಚಿತವಾಗಿದೆ.
ಇನ್ನು ಎಎಪಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಆರಂಭದಿಂದಲೂ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ನವದೆಹಲಿ ಕ್ಷೇತ್ರದ ಒಟ್ಟು 13 ಸುತ್ತುಗಳ ಮತ ಎಣಿಕೆಯಲ್ಲಿ ಸದ್ಯ 9 ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಅರವಿಂದ್ ಕೇಜ್ರಿವಾಲ್ 1170 ಮತಗಳ ಅಂತರದ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ಮುನ್ನಡೆ ಸಾಧಿಸಿದ್ದಾರೆ. ಇನ್ನು ಆರಂಭದಿಂದಲ್ಲೇ ಹಿನ್ನಡೆ ಅನುಭವಿಸಿದ್ದ ಅರವಿಂದ್ ಕೇಜ್ರಿವಾಲ್ ಐದನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದರು. ಬಳಿಕ ಮತ್ತೆ ಹಿನ್ನಡೆ ಅನುಭವಿಸಿದ ಅರವಿಂದ್ ಕೇಜ್ರಿವಾಲ್ ಇನ್ನೂ ಸಹ ಸುಧಾರಿಸಿಕೊಂಡಿಲ್ಲ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


