ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ 2025ರ ಫಲಿತಾಂಶ ಇಂದು (ಫೆಬ್ರವರಿ 8) ಹೊರಬೀಳಲಿದ್ದು, ಸದ್ಯ ಯಾವ ಪಕ್ಷಗಳು ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ ಎಂಬ ಮಾಹಿತಿ ಹೊರಬಿದ್ದಿದೆ.
ಬೆಳಗ್ಗೆ 9.30ರ ಸಮಯಕ್ಕೆ 70 ಕ್ಷೇತ್ರಗಳ ಪೈಕಿ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅರ್ಧಶತಕ ಬಾರಿಸಿದೆ. ಇನ್ನು ದಶಕದಿಂದ ಅಧಿಕಾರದಲ್ಲಿರುವ ಆಪ್ 19 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಇನ್ನು ದೆಹಲಿ ಗದ್ದುಗೆ ಏರಲು 36 ಸ್ಥಾನಗಳಲ್ಲಿ ಗೆಲ್ಲಬೇಕಾಗಿದ್ದು, ಈ ಟ್ರೆಂಡ್ ಹೀಗೆಯೇ ಮುಂದುವರಿದರೆ, ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


