ನವದೆಹಲಿ: ಫೆಬ್ರವರಿ 5ರಂದು ನಡೆದಿದ್ದ ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು (ಫೆಬ್ರವರಿ 8) ನಡೆಯುತ್ತಿದ್ದು, ಬೆಳಗ್ಗೆ ಎಂಟು ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ.
9.15ರ ಸಮಯಕ್ಕೆ ಎಲ್ಲಾ 70 ಕ್ಷೇತ್ರಗಳ ಮುನ್ನಡೆ ವರದಿ ಬಹಿರಂಗವಾಗಿದೆ. ಈ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದು, ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 36 ಅನ್ನು ದಾಟಿದೆ.
ಅತ್ತ ಆಪ್ 28 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದೆ. ಈ ಮುನ್ನಡೆ ಸಂಖ್ಯೆಗಳು ಹೀಗೆಯೇ ಮುಂದುವರಿದರೆ ಬಿಜೆಪಿ 27 ವರ್ಷಗಳ ಬಳಿಕ ದೆಹಲಿಯಲ್ಲಿ ತನ್ನ ಬಾವುಟವನ್ನು ಹಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


