ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2025 ಎರಡನೇ ಲೀಗ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ ಡಾರ್ಲಿಂಗ್ ಕೃಷ್ಣ ಅಬ್ಬರದ ಬ್ಯಾಟಿಂಗ್ ನೆರವಿನಿಂದ 10 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 113 ರನ್ ಬಾರಿಸಿದೆ.
ತಂಡದ ಪರ ಆರಂಭಿಕರಾಗಿ ಡಾರ್ಲಿಂಗ್ ಕೃಷ್ಣ ಹಾಗೂ ರಾಜೀವ್ ಹನು ಕಣಕ್ಕಿಳಿದರು. ಈ ಪೈಕಿ ರಾಜೀವ್ ಕೇವಲ 1 ರನ್‌ಗೆ ವಿಕೆಟ್ ಒಪ್ಪಿಸಿದರೆ, ಬೆನ್ನಲ್ಲೇ ಕಾರ್ತಿಕ್ ಜಯರಾಮ್ 3 ರನ್ ಗಳಿಸಿ ನಿರ್ಗಮಿಸಿದರು ಹಾಗೂ ಮಂಜುನಾಥ್ 2 ರನ್ ಕಲೆಹಾಕಿದರು. ಹೀಗೆ ಸಾಲು ಸಾಲಾಗಿ ಟಾಪ್ ಆರ್ಡರ್ ಕುಸಿಯುತ್ತಿದ್ದರೆ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಡಾರ್ಲಿಂಗ್ ಕೃಷ್ಣ 38 ಎಸೆತಗಳಲ್ಲಿ ಅಜೇಯ 80 ರನ್ ಬಾರಿಸಿ ಅಬ್ಬರಿಸಿದರು.
ತೆಲುಗು ವಾರಿಯರ್ಸ್ ಪರ ಖಯುಮ್ ಹಾಗೂ ಆದಿ ತಲಾ ಒಂದೊಂದು ವಿಕೆಟ್ ಪಡೆದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


