ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2025 ಎರಡನೇ ಲೀಗ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ವಿರುದ್ಧ 46 ರನ್‌ಗಳ ಗೆಲುವನ್ನು ದಾಖಲಿಸಿದೆ. ಚಿನ್ನಸ್ವಾಮಿಯಲ್ಲಿ ಎದ್ದ ಕರ್ನಾಟಕ ಬುಲ್ಡೋಜರ್ಸ್ ಬಿರುಗಾಳಿಗೆ ತೆಲುಗು ವಾರಿಯರ್ಸ್ ಎಲೆ ತಗ್ಗಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ ಡಾರ್ಲಿಂಗ್ ಕೃಷ್ಣ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 113 ರನ್ ಬಾರಿಸಿತು. ಅತ್ತ ತೆಲುಗು ವಾರಿಯರ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 99 ರನ್ ಕಲೆಹಾಕಿತು. ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ 14 ರನ್‌ಗಳ ಮುನ್ನಡೆಯನ್ನು ಕರ್ನಾಟಕ ಬುಲ್ಡೋಜರ್ಸ್ ಸಾಧಿಸಿತು.
ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ 3 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ತೆಲುಗು ವಾರಿಯರ್ಸ್ ತಂಡಕ್ಕೆ ಗೆಲ್ಲಲು 138 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ತೆಲುಗು ವಾರಿಯರ್ಸ್ 9 ವಿಕೆಟ್ ನಷ್ಟಕ್ಕೆ 91 ರನ್ ಕಲೆಹಾಕಿತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


