ನವದೆಹಲಿ: ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


