ರಾಜ್ಯದ 15 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೈತರು ಜಮೀನುಗಳಲ್ಲಿ ಮರದ ಕೆಳಗೆ ನಿಲ್ಲಬಾರದು ಎಂದು ಸೂಚನೆ ನೀಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


