ಕೋಲಾರ: ಸರ್ವೇ ಸೂಪರ್ವೈಸರ್ ಸುರೇಶ್ ಬಾಬು ಅವರ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಕೋಲಾರ ನಗರ, ಮಾಲೂರು ಪಟ್ಟಣ, ನಿಡಘಟ್ಟ ಗ್ರಾಮದಲ್ಲಿ ಇರುವ ಮನೆಗಳು ಹಾಗೂ ಕಚೇರಿಗಳನ್ನು ಸೇರಿಸಿ ಒಟ್ಟು ಆರು ಕಡೆಗಳಲ್ಲಿ ಲೋಕಾಯುಕ್ತ ಎಸ್ಪಿ ಧನಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ಸರ್ಕಾರಿ ದಾಖಲೆಗಳನ್ನು ಕೃತಕವಾಗಿ ತಿದ್ದುಪಡಿ ಮಾಡಿ ಭೂಮಿ ಕಬಳಿಕೆ ಮಾಡಿದ ಆರೋಪ ಹಾಗೂ ಕೋಟ್ಯಾಂತರ ರೂ. ಮೌಲ್ಯದ ಆಕ್ರಮ ಆಸ್ತಿ ಸಂಗ್ರಹಿಸಿದ ಶಂಕೆಯ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಕ್ಷೇತ್ರಗಳಿಂದ ಸಿಬ್ಬಂದಿಯನ್ನು ನೇಮಿಸಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಮೂರು ತಿಂಗಳ ಹಿಂದೆಯೇ ಸುರೇಶ್ ಬಾಬು ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದರು. ಇದೀಗ ಮತ್ತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


