Tuesday, November 10, 2026
spot_img
More
    spot_img
    HomeTop Storyಆಪರೇಷನ್‌ ಸಿಂದೂರ್‌ ಯಶಸ್ವಿ; ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜಮೀರ್‌ ಸೂಚನೆ

    ಆಪರೇಷನ್‌ ಸಿಂದೂರ್‌ ಯಶಸ್ವಿ; ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜಮೀರ್‌ ಸೂಚನೆ

    ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ಕರ್ನಾಟಕ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಸಂದೇಶ ರವಾನಿಸಿದ್ದಾರೆ.

    ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

    ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.

    ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮುಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಇಂತಹದೊಂದು ಸೂಚನೆ ನೀಡಿದ್ದು ಮೆಚ್ಚುಗೆಗೆ ಕಾರಣವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search