Thursday, September 3, 2026
spot_img
More
    spot_img
    HomeLatest newsಬಿಹಾರ ಚುನಾವಣೆ: ಮಹಿಳೆಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.35 ಮೀಸಲಾತಿ ಘೋಷಣೆ!

    ಬಿಹಾರ ಚುನಾವಣೆ: ಮಹಿಳೆಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.35 ಮೀಸಲಾತಿ ಘೋಷಣೆ!

    ಪಾಟ್ನಾ: ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ಪ್ರಮುಖ ನಾರಿ ಶಕ್ತಿ ಅಭಿಯಾನದಲ್ಲಿ ರಾಜ್ಯದ ಪ್ರತಿಯೊಂದು ವರ್ಗದ ಸರ್ಕಾರಿ ಉದ್ಯೋಗಗಳಲ್ಲಿನ ಎಲ್ಲಾ ಹುದ್ದೆಗಳಲ್ಲಿ ಶೇಕಡಾ 35 ರಷ್ಟು ಹುದ್ದೆಗಳನ್ನು ಬಿಹಾರದ ಖಾಯಂ ನಿವಾಸಿಗಳಾಗಿರುವ ಮಹಿಳೆಯರಿಗೆ ಮಾತ್ರ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.

    Advertisement

    ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 243 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಬಿಹಾರದಲ್ಲಿ ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇದು ಹಾಲಿ ಸರ್ಕಾರಕ್ಕೆ ಭಾರೀ ಬಲ ನೀಡಲಿದೆ ಎಂದು ವ್ಯಾಖ್ಯಾನಿಸಲಾಗಿದೆ.

    ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ಎಲ್ಲಾ ಸರ್ಕಾರಿ ಸೇವೆಗಳು ಮತ್ತು ಹುದ್ದೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.35 ಮೀಸಲಾತಿಯನ್ನು ಘೋಷಿಸಿದೆ.

    ಎಲ್ಲಾ ಹಂತಗಳು ಮತ್ತು ಇಲಾಖೆಗಳಲ್ಲಿ ಸಾರ್ವಜನಿಕ ಸೇವೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಬಿಹಾರದಲ್ಲಿ ಹೆಚ್ಚಿನ ಮಹಿಳೆಯರು ಕಾರ್ಯಪಡೆಗೆ ಪ್ರವೇಶಿಸುವುದನ್ನು ಮತ್ತು ಆಡಳಿತದಲ್ಲಿ ದೊಡ್ಡ ಪಾತ್ರವನ್ನು ವಹಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ನಿರ್ಧಾರ ಹೊಂದಿದೆ ಎಂದು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಕಳೆದ ತಿಂಗಳು, ನಿತೀಶ್ ಕುಮಾರ್ ಅವರು ರಾಜ್ಯ ಸರ್ಕಾರವು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪಿಂಚಣಿಯನ್ನು 400 ರೂ.ಗಳಿಂದ 1100 ರೂ.ಗಳಿಗೆ ಹೆಚ್ಚಿಸಿದೆ ಎಂದು ಘೋಷಿಸಿದರು. ಫಲಾನುಭವಿಗಳು ಜುಲೈ ತಿಂಗಳಿನಿಂದ ಹೆಚ್ಚಿದ ಪಿಂಚಣಿಯನ್ನು ಪಡೆಯುತ್ತಾರೆ ಮತ್ತು ನಂತರ ಪ್ರತಿ ತಿಂಗಳು 10 ನೇ ತಾರೀಖಿನಂದು ಖಾತೆಗೆ ಜಮಾ ಮಾಡಲಾಗುತ್ತದೆ. ವೃದ್ಧರು ಸಮಾಜದ ಅಮೂಲ್ಯ ಭಾಗವಾಗಿದ್ದು, ಅವರ ಗೌರವಾನ್ವಿತ ಜೀವನವನ್ನು ಖಚಿತಪಡಿಸಿಕೊಳ್ಳುವುದು ನಮ ಪ್ರಮುಖ ಆದ್ಯತೆಯಾಗಿದೆ. ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದರು.

    ಅನ್ನಭಾಗ್ಯ ಲಾರಿ ಬಾಡಿಗೆ ಬಾಕಿ ಹಣ ಬಿಡುಗಡೆ ಮಾಡಿದ ಸರ್ಕಾರ; ಮುಷ್ಕರ ವಾಪಸ್‌

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading