Monday, August 31, 2026
spot_img
More
    spot_img
    HomeJobsಬ್ಯಾಂಕ್ ಆಫ್ ಬರೋಡಾದಲ್ಲಿ ಭರ್ಜರಿ ಉದ್ಯೋಗ ಅವಕಾಶ: 2500 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

    ಬ್ಯಾಂಕ್ ಆಫ್ ಬರೋಡಾದಲ್ಲಿ ಭರ್ಜರಿ ಉದ್ಯೋಗ ಅವಕಾಶ: 2500 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಶುಭ ಸುದ್ದಿ ಬ್ಯಾಂಕ್ ಆಫ್ ಬರೋಡಾ (BOB) 2025-26 ನೇ ಸಾಲಿಗೆ 2,500 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ 4 ಜುಲೈ 2025 ರಿಂದ ಪ್ರಾರಂಭವಾಗಿದ್ದು, ಜುಲೈ 24, 2025 ರೊಳಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು.ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು

    Advertisement

    ಹುದ್ದೆ : ಲೋಕಲ್ ಬ್ಯಾಂಕ್ ಆಫೀಸರ್

    ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

    ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 450 ಹುದ್ದೆಗಳು ಖಾಲಿ ಇದೆ.

    ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

    ವಯೋಮಾನ : ದಿನಾಂಕ 01/07/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

    ವಯೋಮಿತಿ ಸಡಿಲಿಕೆ

    ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
    ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
    ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

    ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

    ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ಭಾಷಾ ಪ್ರಾವೀಣ್ಯತೆಯ ಪರೀಕ್ಷೆ, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

    ಆನ್‌ಲೈನ್‌ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಕಲಬುರಗಿ, ಉಡುಪಿ, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು.

    ಅರ್ಜಿ ಶುಲ್ಕ :

    ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 850
    ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು – ರೂ. 175

    ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

    ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ

    ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 04, 2025
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 24, 2025
    ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 24, 2025

    ವೇತನ ಶ್ರೇಣಿ

    ಆಯ್ಕೆಯಾದ ಅಭ್ಯರ್ಥಿಗಳಿಗೆ JMG/S–I ಸ್ಕೇಲ್ ನಲ್ಲಿ ವೇತನ ಶ್ರೇಣಿ ಹೀಗಿರುತ್ತದೆ:

    ಪ್ರಾರಂಭಿಕ ವೇತನ: Rs. 48,480/-
    ಗರಿಷ್ಠ ವೇತನ: Rs. 85,920/-
    ಅನುಭವವನ್ನು ಆಧಾರವಾಗಿ ಒಂದು ಇನ್‌ಕ್ರಿಮೆಂಟ್ ಲಭ್ಯವಿದೆ.

    ಅರ್ಜಿ ಸಲ್ಲಿಸುವ ವಿಧಾನ

    ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

    ಹಂತ 1:
    ಬ್ಯಾಂಕ್ ಪ್ರಕಟಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ. ಅರ್ಜಿ ಸಲ್ಲಿಸಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಪೂರ್ವನಿಶ್ಚಿತವಾಗಿ ಸಿದ್ಧಪಡಿಸಿಕೊಳ್ಳಿ.

    ಹಂತ 2:
    ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಕೆಳಗಿನ “ಅಪ್ಲೈ ಆನ್‌ಲೈನ್” ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಅರ್ಜಿ ಫಾರ್ಮ್ ತೆರೆಯಿರಿ.

    ಹಂತ 3:
    ಅರ್ಜಿಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು (ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಸರಿಯಾಗಿ ಭರ್ತಿ ಮಾಡಿ. ಸಲ್ಲಿಸುವ ಮೊದಲು ಮಾಹಿತಿಯನ್ನು ಒಮ್ಮೆ ಪರಿಶೀಲಿಸಿ.

    ಹಂತ 4:
    ಅರ್ಜಿಯಲ್ಲಿ ಯಾವುದೇ ಪ್ರಮಾಣಪತ್ರಗಳು ಅಥವಾ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚನೆ ಇದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ, ಸ್ಪಷ್ಟವಾಗಿ ಅಪ್ಲೋಡ್ ಮಾಡಿ.

    ಹಂತ 5:
    ಅರ್ಜಿ ಶುಲ್ಕ ಪಾವತಿಸುವಂತೆ ಸೂಚನೆ ಇದ್ದರೆ, ಆ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ.

    ಈ ರೀತಿಯಾಗಿ ಹಂತಗಳನ್ನು ಅನುಸರಿಸಿ, ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಸಬಹುದು

    ವಿವಿಧ ಬ್ಯಾಂಕುಗಳಲ್ಲಿ 5,208 ಹುದ್ದೆಗಳ ನೇಮಕಾತಿ ಆರಂಭ; ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ!


    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading