ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡಿಕೆಶಿ ಸಿಎಂ ಆಗಬೇಕು ಎಂಬ ಕೂಗು ಹೆಚ್ಚಾಗುತ್ತಲೇ ಇದ್ದು, ಕಾಂಗ್ರೆಸ್ ಶಾಸಕರೇ ಮಾಧ್ಯಮದವರ ಬಳಿ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ಕಾಂಗ್ರೆಸ್‌ನಲ್ಲಿ ನಾನು ಬಹಳ ಸಕ್ರಿಯನಾಗಿ ಓಡಾಡುತ್ತಿಲ್ಲ. ನನಗೆ ಮಂತ್ರಿ ಸ್ಥಾನದ ಆಸಕ್ತಿಯಿಲ್ಲ. ಆದರೆ ಮೊದಲು ಡಿಕೆಶಿಗೆ ಸಿಎಂ ಸ್ಥಾನ ಸಿಗಲು ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲಿ ಎಂಬುದು ಜಿಲ್ಲೆಯ ಶಾಸಕರ ಬಯಕೆಯಾಗಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು
ಇನ್ನು ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸೀರಿಯಸ್ ಆಗಿ ಫಾಲೋ ಮಾಡುತ್ತಿಲ್ಲ. ಯಾರು ಏನು ಆಗುತ್ತಿದ್ದಾರೆ. ಏನು ಆಗುತ್ತಿದೆ ಎನ್ನುವ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಸಕ್ರಿಯವಾಗಿಲ್ಲ ಎಂದಿದ್ದಾರೆ.
ಈ ಮೂಲಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಬಹಿರಂಗ ಹೇಳಿಕೆ ನೀಡಿದ ಯೋಗೇಶ್ವರ್ ಸಿಎಂ ಸಿದ್ದರಾಮಯ್ಯ ಬಣದ ವಿರೋಧಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸಿಐಡಿ ತನಿಖೆಯಲ್ಲಿ ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಕಾರಣ ಬಯಲು: ಕೊಹ್ಲಿ ಹೆಸರು ಬಳಸಿ ಮಹಾ ತಪ್ಪು ಮಾಡಿದ್ದು ಈತನೇ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


