ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಮಾಡಿ, ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲು ಮತ್ತು ತತ್ ಕ್ಷಣ ಅಗತ್ಯವಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಕೂಡಲೇ ನೇಮಕಾತಿ ಮಾಡಿಕೊಳ್ಳಲು ಮತ್ತು ವನ, ವನ್ಯಜೀವಿ ಸಂರಕ್ಷಣೆಗೆ ಅಗತ್ಯವಾದ ವಾಹನ, ಉಪಕರಣಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇನ್ನು ಕಾಡಿನಂಚಿನ ಗ್ರಾಮಗಳ ಜನರೊಂದಿಗೆ ಅರಣ್ಯಾಧಿಕಾರಿಗಳು ಸೌಹಾರ್ದಯುತ ಸಂಬಂಧ ಹೊಂದಬೇಕು. ಜನರಿಗೆ ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು. ಕಾಡಿನಂಚಿನ ಜನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕು, ಕೌಶಲ್ಯ ತರಬೇತಿ ಕೊಡಿಸಬೇಕು. ಆಗ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಜನರೇ ಮುಂದಾಗುತ್ತಾರೆ. ಈ ರೀತಿಯ ವಾತಾವರಣ ಸೃಷ್ಟಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಇನ್ನು ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಕಾನನ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ.
ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುತ್ತೇವೆ ಎಂದರು ಹೇಳಿದರು.
ರಾಜ್ಯದಲ್ಲಿ ಸುಮಾರು 40 ಸಾವಿರ ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದ್ದು, ಇದನ್ನು ಭೌತಿಕವಾಗಿ ಕಾವಲು ಕಾಯುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ವನ್ಯಜೀವಿಗಳ ಕಳ್ಳಬೇಟೆ ಮತ್ತು ಅರಣ್ಯ ಒತ್ತುವರಿ, ಮರಗಳ ಅಕ್ರಮ ಕಡಿತಲೆ ಆಗದಂತೆ ನಿಗ್ರಹಿಸಲು ಕೃತಕ ಬುದ್ಧಿಮತ್ತೆ, ಡ್ರೋನ್ ಕ್ಯಾಮರಾ, ಕಾಡಿನಂಚಿನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ಆ ಎಲ್ಲ ಕ್ಯಾಮರಾಗಳ ದೃಶ್ಯಗಳ ಆಧಾರದಲ್ಲಿ ವನ್ಯಮೃಗ ಮತ್ತು ಕಳ್ಳಬೇಟೆಗಾರರ ಚಲನವಲನದ ಬಗ್ಗೆ ನಿಗಾ ಇಡಲು ಕೇಂದ್ರೀಕೃತ ಕಮಾಂಡ್ ಸೆಂಟರ್ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಿಹಾರ ಚುನಾವಣೆ: ಮಹಿಳೆಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.35 ಮೀಸಲಾತಿ ಘೋಷಣೆ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


