ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಾಧ್ಯಕ್ಷರ ಹೆಸರು ಬದಲಾವಣೆ ಆಗುವ ಸಾಧ್ಯತೆಯಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ರಾಜ್ಯಾಧ್ಯಕ್ಷರ ಹೆಸರನ್ನು ಫೈನಲ್ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ರಾಜ್ಯಾಧ್ಯಕ್ಷ ಗಾದಿ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ.
ಈ ಬೆನ್ನಲ್ಲೇ ಇಂದು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಹೈಕಮಾಂಡ್. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಹಲವು ಹೋರಾಟಗಳನ್ನು ಯಶಸ್ವಿಯಾಗಿ ರೂಪಿಸಿಕೊಂಡು ಬರುತ್ತಿದ್ದಾರೆ. ವಿಜಯೇಂದ್ರ ಸಮರ್ಥ ನಾಯಕರಾಗಿದ್ದು, ಉತ್ತಮವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಬಿಗ್ ಪೈಟ್ ನಡೆಯುತ್ತಿದೆ. ರಾಜ್ಯ ಸರ್ಕಾರದಲ್ಲಿ ಹಲವು ಗೊಂದಲಗಳಿವೆ. ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ಬಂದು ಸಭೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಪತನವಾಗುವುದು ಗ್ಯಾರಂಟಿ. ಸೂರ್ಯ ಚಂದರ ಇರೋದು ಎಷ್ಟು ಸತ್ಯವೋ, ಈ ಕಾಂಗ್ರೆಸ್ ಸರ್ಕಾರ ಪತನ ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದರು.
ವಾಮಾಚಾರ ಶಂಕೆ: ಪಂಚಾಯಿತಿ ಕರೆದು ಒಂದೇ ಕುಟುಂಬದ ಐವರನ್ನು ಬೆಂಕಿಹಚ್ಚಿ ಸುಟ್ಟ ಗ್ರಾಮಸ್ಥರು!
ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


