ಬೆಂಗಳೂರು: ಜೂನ್ 3ರಂದು ತನ್ನ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರನೇ ದಿನ ಬೆಂಗಳೂರಿಗೆ ಬಂದಿಳಿದಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಯಶಸ್ಸನ್ನು ಆಚರಿಸಲು ವಿಶೇಷ ಕಾರ್ಯಕ್ರಮವನ್ನೂ ಸಹ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಕಿಕ್ಕಿರಿದು ಕ್ರೀಡಾಂಗಣದ ಬಳ ಅಭಿಮಾನಿಗಳು ಸೇರಿದ್ದ ಕಾರಣ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಈ ಪ್ರಕರಣವನ್ನು ಸದ್ಯ ಸಿಐಡಿ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದು, ಸದ್ಯ ಪ್ರಕರಣದ ಕುರಿತು ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿತ್ತು ಎಂಬ ಅಂಶ ತನಿಖೆಯಲ್ಲಿ ತಿಳಿದುಬಂದಿದೆ. ಆರ್‌ಸಿಬಿ ಸಿಇಒ ರಾಜೇಶ್ ಮೆನನ್ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಮುಖ್ಯಸ್ಥ, ಕೊಹ್ಲಿ ಆಪ್ತ ನಿಖಿಲ್ ಸೋಸ್ಲೆ ಕಾರ್ಯಕ್ರಮ ಆಯೋಜನೆಯ ಜವಾಬ್ದಾರಿ ಹೊತ್ತುಕೊಂಡಿದ್ದರು.
ಆದರೆ ಸರಿಯಾದ ಯೋಜನೆಯಿಲ್ಲದೇ ಕೆಎಸ್‌ಸಿಎ ಮೇಲೆ ಒತ್ತಡ ಹಾಕಿ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿದುಬಂದಿದ್ದು, ವಿರಾಟ್ ಕೊಹ್ಲಿ ವಿದೇಶಕ್ಕೆ ಪ್ರಯಾಣ ಬೆಳೆಸಬೇಕಿದೆ ಎಂಬ ಕಾರಣವನ್ನು ನೀಡಿ ಆತುರದಿಂದ ಕಾರ್ಯಕ್ರಮ ನಡೆಸಲಾಯಿತು ಎಂದು ಸಿಐಡಿಯಲ್ಲಿ ಬಯಲಾಗಿದೆ. ಕೆಎಸ್‌ಸಿಎ ಹಾಗೂ ಪೊಲೀಸರು ಕಾರ್ಯಕ್ರಮ ಆಯೋಜನೆ ತಡವಾಗಿ ಮಾಡೋಣ ಎಂದು ಹೇಳಿದರೂ ಕೊಹ್ಲಿ ಆಪ್ತ ನಿಖಿಲ್ ಸೋಸ್ಲೆ ಕೊಹ್ಲಿ ವಿದೇಶ ಪ್ರಯಾಣದ ಕಾರಣವನ್ನು ನೀಡಿದರು ಎನ್ನಲಾಗುತ್ತಿದೆ.
ನಾಳೆ ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್; ಬ್ಯಾಂಕ್ ಬೆಂಬಲವಿರುತ್ತಾ?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


