Thursday, September 3, 2026
spot_img
More
    spot_img
    HomeLatest newsಇಬ್ಬರು ಜಿಲ್ಲಾಧಿಕಾರಿಗಳು ಸೇರಿದಂತೆ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?

    ಇಬ್ಬರು ಜಿಲ್ಲಾಧಿಕಾರಿಗಳು ಸೇರಿದಂತೆ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?

    ಬೆಂಗಳೂರು: ರಾಜ್ಯ ಸರ್ಕಾರ ಆಡಳಿತದಲ್ಲಿ ಮತ್ತೆ ದೊಡ್ಡ ಸರ್ಜರಿ ಮಾಡಿದ್ದು, ಇಬ್ಬರು ಜಿಲ್ಲಾಧಿಕಾರಿಗಳು ಸೇರಿದಂತೆ ಒಟ್ಟು 13 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

    Advertisement

    ವಿಜಯನಗರದ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಬಾಲನ್‌ ಟಿ ಹಾಗೂ ಯಾದಗಿರಿ ಜಿಲ್ಲಾಧಿಕಾರಿ ಸುಶೀಲ ಬಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಭೂಬಾಲನ್‌ ಟಿ ಅವರನ್ನು ಇ ಆಡಳಿತ ಇಲಾಖೆಯ ಇ ಆಡಳಿತ ಕೇಂದ್ರದ ಸಿಇಒ ಆಗಿ ವರ್ಗಾವಣೆ ಮಾಡಲಾಗಿದ್ದು, ಸುಶೀಲ ಬಿ ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹುದ್ದಗೆ ವರ್ಗಾಯಿಸಲಾಗಿದೆ.

    ವಿಜಯನಗರ ಜಿಲ್ಲೆಗೆ ದಕ್ಷಿಣ ಕನ್ನಡ ಪಂಚಾಯತ್‌ ಸಿಇಒ ಆನಂದ್‌ ಕೆ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದ್ದು, ಅಟಲ್‌ ಜನಸ್ನೇಹಿ ಕೇಂದ್ರದ ಎಂಡಿ ಭೂಯಲ್‌ ಹರ್ಷ ನಾರಾಯಣ ರಾವ್‌ ಅವರನ್ನು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

    ಉಳಿದ ಐಎಎಸ್‌ ಅಧಿಕಾರಿಗಳನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎಂಬ ವಿವರ ಮುಂದಿದೆ
    ಜಹೀರಾ ನಸೀಮ್‌ – ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು
    ಪಂಡ್ವೆ ರಾಹುಲ್‌ ತುಕಾರಾಮ್‌ – ಕಲಬುರಗಿ ಪಬ್ಲಿಕ್‌ ಇನ್ಸ್ಟ್ರಕ್ಷನ್‌ ಹೆಚ್ಚುವರಿ ಆಯುಕ್ತ
    ದಿಲೀಶ್‌ ಸಸಿ – ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ ಸಿಇಒ
    ಈಶ್ವರ್‌ ಕುಮಾರ್‌ – ರಾಯಚೂರು ಜಿಲ್ಲಾ ಪಂಚಾಯತ್‌ ಸಿಇಒ
    ಶಿಶಿಧರ್‌ ಕುರೇರಾ – ಕೆಯುಐಡಿಎಫ್‌ಸಿ ಜಂಟಿ ವ್ಯವಸ್ಥಾಪಕ ನಿರ್ದೇಶಕ
    ಡಾ. ಆಕಾಶ್‌ ಎಸ್‌ – ಬಾಗಲಕೋಟೆ ಜಿಲ್ಲಾ ಪಂಚಾಯತ್‌ ಸಿಇಒ
    ಅಪರ್ಣಾ ರಮೇಶ್‌ – ಇಡಿಸಿಎಸ್‌ ನಿರ್ದೇಶಕರು
    ನರ್ವಾಡೆ ವಿನಾಯಕ್‌ ಕರ್ಬಾರಿ – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸಿಇಒ
    ಯತೀಶ್‌ ಆರ್‌ – ಬೆಂಗಳೂರು ನಗರ ಜಿಲ್ಲಾ ಪಂಚಾಯತ್‌ ಸಿಇಒ

    ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶಕ್ಕೆ ಹೈಕೋರ್ಟ್‌ ತಡೆ: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading