ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರವನ್ನು ಸ್ಥಗಿತ ಮಾಡುವುದು ಬೇಡ ಎಂದು ಸೂಚನೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ತಿಳಿಸಿದರು.
ಈ ವಾದ ಆಲಿಸಿದ ಹೈಕೋರ್ಟ್ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.
ಮಕ್ಕಳ ಟಿಫಿನ್‌ಬಾಕ್ಸ್‌ಗೂ ಫಿಟ್ ಪೌಷ್ಟಿಕ ಹೆಸರು ಕಾಳಿನ ದೋಸೆ ರೆಸಿಪಿ ಇಲ್ಲಿದೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


