Wednesday, September 2, 2026
spot_img
More
    spot_img
    HomeLatest newsಕಳೆದ 3 ವರ್ಷದಲ್ಲಿ ಕಾಂಗ್ರೆಸ್‌ 3 ಲಕ್ಷ ಕೋಟಿ ಸಾಲ ಮಾಡಿದೆ: ನಿಖಿಲ್‌ ಕುಮಾರಸ್ವಾಮಿ

    ಕಳೆದ 3 ವರ್ಷದಲ್ಲಿ ಕಾಂಗ್ರೆಸ್‌ 3 ಲಕ್ಷ ಕೋಟಿ ಸಾಲ ಮಾಡಿದೆ: ನಿಖಿಲ್‌ ಕುಮಾರಸ್ವಾಮಿ

    ಬೆಂಗಳೂರು: ಕಳೆದ ಮೂರು ವರ್ಷದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 3 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

    Advertisement

    ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿರುವುದನ್ನು ಸ್ವಾಗತಿಸಿರುವ ಅವರು, ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯಸರ್ಕಾರಕ್ಕೆ ಸರ್ವ ಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.

    ಈ ಸಂಬಂಧ ತಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಜಿಎಸ್‍ಡಿಪಿಯಲ್ಲಿ ಸಾಲದ ಪ್ರಮಾಣ ಶೇ 24.91 ರಷ್ಟು ಆಗಿದೆ. ನಿಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ 55 ಸಾವಿರ ಕೋಟಿ ರೂ. ಬೇಕಾಗಿದೆ. ಕಳೆದ ಮೂರು ವರ್ಷದಿಂದ ನಿಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ ಒಂದು ಲಕ್ಷ ಕೋಟಿ ರೂ. ಎಂದು ಟೀಕಿಸಿದ್ದಾರೆ.

    ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, ಇದು ರಾಜ್ಯಸರ್ಕಾರದ ಆರ್ಥಿಕ ಸಂಕಷ್ಟವನ್ನು ದೃಢಪಡಿಸುತ್ತದೆ ಎಂದಿದ್ದಾರೆ.

    ರಾಹುಲ್‌ ಗಾಂಧಿ ಮತಗಳ್ಳತನ ಆರೋಪದ ಬಗ್ಗೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading