ಮಂಡ್ಯ: ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ, ಹಿಂದೂಪರ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆ ನಡೆಸಿವೆ. ಈ ಪ್ರತಿಭಟನೆಯ ವೇಳೆ ಮತ್ತೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತು.
ಮೆರವಣಿಗೆಯಲ್ಲಿ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್
ಇಂದು ಬೆಳಗ್ಗೆ ಪ್ರತಿಭಟನೆಯ ಭಾಗವಾಗಿ ಮೆರವಣಿಗೆ ನಡೆಸುತ್ತಿದ್ದಾಗ, ಕೆಲ ಕಿಡಿಗೇಡಿಗಳು ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ, ಲಾಠಿ ಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಘಟನೆಯಿಂದ ಕೆಲ ಮಹಿಳೆಯರು ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಸೀದಿ ಬಳಿ ಹಿಂದೂ ಕಾರ್ಯಕರ್ತರು ಕರ್ಪೂರ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮದ್ದೂರಿನ ಹೂವಿನ ವೃತ್ತದಲ್ಲಿ ಮುಸ್ಲಿಮರ ಹಸಿರು ಧ್ವಜವನ್ನು ಕಿತ್ತುಹಾಕಿ, ಅದರ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಕೇಸರಿ ಧ್ವಜವನ್ನು ಹಾರಿಸಿದ್ದಾರೆ. ಈ ವೇಳೆ ‘ಜೈ ಶ್ರೀರಾಮ್’ ಘೋಷಣೆಗಳು ಮೊಳಗಿದವು.
ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು, ಮದ್ದೂರು ಪಟ್ಟಣದಲ್ಲಿ ಇಂದು ಬೆಳಿಗ್ಗೆ 6 ರಿಂದ ನಾಳೆ ಮಧ್ಯಾಹ್ನ 12 ರವರೆಗೆ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಪೊಲೀಸ್ ತಂಡ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಿದೆ.
ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಹೇಳಿಕೆ ಪ್ರಕಾರ, ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ರಾಮರಹಿಮ್ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಯಾರೋ ಲೈಟ್ ಆಫ್ ಮಾಡಿ ಕಲ್ಲು ಎಸೆದಿದ್ದಾರೆ ಎಂಬ ಆರೋಪವಿದೆ. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣಗಳು ದಾಖಲಾಗಿದ್ದು, 21 ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ಚನ್ನಪಟ್ಟಣದವರಾದರೆ, ಉಳಿದವರು ಸ್ಥಳೀಯರು. ಕಲ್ಲು ತೂರಾಟದಲ್ಲಿ ಮೂವರು ಯುವಕರು ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ.
ಮನೆ ಖರೀದಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ BDA ಇಂದ ಕ್ರಯಪತ್ರ ನೋಂದಣಿ ಮೇಳ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


