ರವಿವಾರ ಬೆಂಗಳೂರು ಯಶವಂತಪುರ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಉದ್ಘಾಟಿಸಿದ ಬಳಿಕ ‘ಜೆಡಿಎಸ್ ಎರಡು ಸ್ಥಾನಕ್ಕಿಂತ ಜಾಸ್ತಿ ಗೆಲ್ಲಲ್ಲ’ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ನಿಖಿಲ್, ಜೆಡಿಎಸ್ ಶಕ್ತಿ ಏನೆಂದು ಮುಂದಿನ ಚುನಾವಣೆಯಲ್ಲಿ ತೋರಿಸುತ್ತೇವೆ, ದಯವಿಟ್ಟು ಸ್ವಲ್ಪ ಸಹನೆ ಇರಲಿ ಎಂದರು.
ತಾಕತ್ತು, ಧಮ್ಮು ಇದ್ದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಾದೇಶಿಕ ಪಕ್ಷವನ್ನು ಕಟ್ಟಿ ಕನಿಷ್ಟ ಒಂದು ಸ್ಥಾನವನ್ನು ತೆಗೆದುಕೊಳ್ಳಲಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆಯಲ್ಲಿ ಎಚ್‌ಡಿ ಕುಮಾರಸ್ವಾಮಿ ಪತ್ನಿ ಹಾಗೂ ಪುತ್ರ ಜಮೀನು ಭೂಸ್ವಾಧೀನ ಪರಿಹಾರಕ್ಕೆ ಅರ್ಜಿ ಹಾಕಿದ್ದಾರೆ ಎಂದ ಡಿಕೆ ಶಿವಕುಮಾರ್ ಅವರಿಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಇದಕ್ಕೆ ಉತ್ತರಿಸಿದ ನಿಖಿಲ್
ಶಿವಕುಮಾರ್ ಅವರೇ, ಸುಳ್ಳು ನಿಮ್ಮನೆ ದೇವರು. ವಿಷಯ ತಿಳಿದುಕೊಂಡು ಮಾತನಾಡಿ. ರಾಮನಗರ ಜಿಲ್ಲೆಗೆ ಹೋಗಿ ರೈತರ ಮುಂದೆ ಅಪಪ್ರಚಾರ ಮಾಡಿದರೆ ನಾವು ಕೈಕಟ್ಟಿ ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.
ಡಿ.ಕೆ ಶಿವಕುಮಾರ್ ಅವರೇ ನಾವು ಎಲ್ಲಿಯೂ, ಯಾವುದೇ ಶಿಕ್ಷಣ ಸಂಸ್ಥೆ, ದೊಡ್ಡ ದೊಡ್ಡ ಮಾಲ್‌ಗಳನ್ನು ಕಟ್ಟಿಕೊಂಡಿಲ್ಲ. ಕಂಡ ಕಂಡವರ ಜಮೀನಿಗೆ ಹೋಗಿಲ್ಲ. ಇನ್ನು ಬಹಳ ವಿಷಯವಿದೆ, ರಾಮನಗರದಲ್ಲಿ ಬಂದು ಉತ್ತರ ಕೊಡುತ್ತೇನೆ ಎಂದು ನಿಖಿಲ್ ಹೇಳಿದ್ದಾರೆ.
ಅನಿತಾ ಕುಮಾರಸ್ವಾಮಿ ಅವರು ಜಮೀನು ಪರಿಹಾರ ಕೇಳಿ ಅರ್ಜಿ ಹಾಕಿದ್ರೆ, ಆ ಜಮೀನನ್ನ ರೈತರಿಗೆ ಬಡವರಿಗೆ ದಾನ ಮಾಡ್ತೇವೆ. ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿ ಎಷ್ಟು ಎಕರೆ ಜಮೀನು ಇದೆ ಅಂತ ಡಿಕೆ ಶಿವಕುಮಾರ್ ಅವರಿಗೆ ಗೊತ್ತಿಲ್ಲ. ಡಿ.ಕೆ ಶಿವಕುಮಾರ್ ಅವರಿಗೆ ಗಾಳಿಯಲ್ಲಿ ಗುಂಡಿ ಹೊಡೆಯೋ ಅಭ್ಯಾಸ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
,ಶಾಲೆ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


