Wednesday, September 2, 2026
spot_img
More
    spot_img
    HomeLatest newsಧರ್ಮದ ಕಲಂನಲ್ಲಿ ವೀರಶೈವ - ಲಿಂಗಾಯತ ಎಂದು ಬರೆಸಿ ಎಂದ ಈಶ್ವರ್‌ ಖಂಡ್ರೆ

    ಧರ್ಮದ ಕಲಂನಲ್ಲಿ ವೀರಶೈವ – ಲಿಂಗಾಯತ ಎಂದು ಬರೆಸಿ ಎಂದ ಈಶ್ವರ್‌ ಖಂಡ್ರೆ

    ಬೆಂಗಳೂರು: ರಾಜ್ಯಾದ್ಯಂತ ಬರುವ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ, ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಮಾಡಿದೆ.

    Advertisement

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಹಿಂದಿನಿಂದಲೂ ಮಹಾಸಭಾ ವೀರಶೈವ ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ. ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂಬುದು ಸಾರ್ವತ್ರಿಕ ಅಭಿಪ್ರಾಯವಾಗಿದೆ ಎಂದರು.

    ಉಳಿದಂತೆ ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು ಬರೆಸುವಂತೆ ಹಾಗೂ ಉಪ ಜಾತಿಯ ಕಾಲಂನಲ್ಲಿರುವ ತಮ ತಮ ಉಪಜಾತಿ ಹೆಸರು ಬರೆಸುವಂತೆ ಮನವಿ ಮಾಡಿದರು.

    ಸರ್ಕಾರಕ್ಕೆ ನಾಡಿನ ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ನಿಖರ ಮಾಹಿತಿ ದೊರೆತರೆ, ನಾಡಿನ ಜನರೆಲ್ಲರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಲು ಅನುವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

    ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧವಿಲ್ಲ. ನೈಜ ಜಾತಿ, ಶಾಲಾ ದಾಖಲಾತಿ ಇತ್ಯಾದಿ ಪರಾಮರ್ಶಿಸಿದ ಬಳಿಕವಷ್ಟೇ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಹೇಳಿದರು.

    ಹೀಗಾಗಿ ಪ್ರತಿಯೊಬ್ಬರೂ ತಮ ನೈಜ ಜಾತಿಯನ್ನೇ ಸಮೀಕ್ಷೆಯಲ್ಲಿ ಬರೆಸಬೇಕು, ನಮ ಸಮುದಾಯದ ನೈಜ ಸಂಖ್ಯೆ ಹೊರಹೊಮ್ಮಲು ಸಹಕರಿಸಬೇಕು ಎಂದು ಸಮಸ್ತ ವೀರಶೈವ ಲಿಂಗಾಯತ ಸಮಾಜದ ಬಾಂಧವರಿಗೆ ಸಭಾ ಪರಿವಾಗಿ ಮನವಿ ಮಾಡಿದರು.

    ಎಲ್ಲ ಜಾತಿ, ಸಮುದಾಯಕ್ಕೂ ನ್ಯಾಯ ದೊರಕುವ ರೀತಿಯಲ್ಲಿ ಸಮೀಕ್ಷೆಯನ್ನು ನಡೆಸುವಂತೆ ಸಭಾ ಸರ್ಕಾರಕ್ಕೆ ಮನವಿ ಮಾಡಿದೆ, ಅದೇ ರೀತಿ ಎಲ್ಲ ಪರಮಪೂಜ್ಯ ಸ್ವಾಮೀಜಿಗಳಿಗೂ ಈ ಸಂಬಂಧ ಏಕಮತ್ಯದಿಂದ ಮತ್ತು ಒಕ್ಕೊರಲಿನಿಂದ ಸಮೀಕ್ಷೆಯಲ್ಲಿ ನೈಜವಾದ ಜಾತಿ ಹೆಸರು ಬರೆಸುವಂತೆ ಸಭಾ ಮನವಿ ಮಾಡಿದೆ ಎಂದು ತಿಳಿಸಿದರು.

    ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಮಹದೇವ್ ಬಿದರಿ ಮಾತನಾಡಿ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿ ಗತಿಯ ಸಮೀಕ್ಷೆ ಆಧಾರದಲ್ಲಿ ಸಮುದಾಯದ ಹಿಂದುಳಿದಿರುವಿಕೆ ಗುರುತಿಸಿ ಅವರಿಗೆ ಸೌಲಭ್ಯ ಕಲ್ಪಿಸುತ್ತದೆ. ಈ ಹಿಂದಿನ ಸಮೀಕ್ಷೆಗಳಲ್ಲಿ ವೀರಶೈವ ಮತ್ತು ಲಿಂಗಾಯತರನ್ನು ಒಂದು ಜಾತಿ ಎಂದು ಪರಿಗಣಿಸಲಾಗಿದೆ. ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ಅಧಿಕೃತವಾಗಿ ನೀಡಿಲ್ಲ. ಅದನ್ನು ಪರಿಗಣಿಸುವ ಅಗತ್ಯವಿದೆ ಎಂದರು.

    ನಮ್ಮ ಸಮಾಜದಲ್ಲಿ ಹಿಂದುಳಿದವರು, ಅತಿ ಹಿಂದುಳಿದವರು ಮತ್ತು ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಪಾರದರ್ಶಕವಾಗಿ ವಿವಿಧ ವೃತ್ತಿಯನ್ನು ಮಾಡುವ ಬಡವ ಮತ್ತು ಕಡು ಬಡವರಿಗೆ ಪ್ರಾಮಾಣಿಕವಾಗಿ ಅಂಕ ನೀಡಿ, ಸೂಕ್ತ ಪ್ರವರ್ಗಕ್ಕೆ ಸೇರಿಸುವಂತೆ ಮನವಿ ಮಾಡಿದರು.

    ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಕಾರ್ಯದರ್ಶಿ ರೇಣುಕ ಪ್ರಸನ್ನ ಮತ್ತು ವೀಣಾ ಕಾಶೆಪ್ಪನವರ್ ಪಾಲ್ಗೊಂಡಿದ್ದರು.

    ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡಿದ ವಿನಯ್‌ ಗುರೂಜಿ ನಿಂತಿದ್ದು ಯಾರ ಪರ?

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading