ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ಆರೋಪಿಸಿರುವ ಚಿನ್ನಯ್ಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಯಾವ ವರದಿ ನೀಡಲಿದ್ದಾರೆ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗಲೇ, ಇದರ ಜೊತೆ ಜೊತೆಗೆ ಸೌಜನ್ಯ ಪ್ರಕರಣ ಸಹ ಮುನ್ನೆಲೆಗೆ ಬಂದಿದೆ.
ಎಸ್ಐಟಿಗೆ ಸೌಜನ್ಯ ತಾಯಿ ಪ್ರಕರಣವನ್ನು ಮರು ತನಿಖೆ ಮಾಡಬೇಕೆಂದು ದೂರು ಕೊಟ್ಟಿದ್ದು, ಇತ್ತ ಸೌಜನ್ಯ ಮಾವ ವಿಠ್ಠಲ ಗೌಡನನ್ನೂ ಸಹ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇದರ ನಡುವೆಯೇ ಇದೀಗ ಮಂಗಳೂರಿನಲ್ಲಿ ಟಿವಿ9 ಜತೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಆಕೆಯ ಮಾವ ವಿಠ್ಠಲ ಗೌಡನೇ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಾದ ಎಲ್ಲ ಸಾಕ್ಷ್ಯಗಳೂ ತನ್ನ ಬಳಿ ಇದ್ದು, ಅವುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಿ ದೂರು ನೀಡುವುದಾಗಿ ತಿಳಿಸಿದ್ದಾರೆ ಹಾಗೂ ಪ್ರಕರಣದ ತನಿಖೆಯನ್ನು ಮುಂದುವರಿಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.
ಮನೆ ಖರೀದಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ BDA ಇಂದ ಕ್ರಯಪತ್ರ ನೋಂದಣಿ ಮೇಳ!
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


