Saturday, September 19, 2026
spot_img
More
    spot_img
    HomeLatest newsಮತ್ತೆ ಕೆಂಪಾದ ಜೆಎನ್‌ಯು: ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಡ ಒಕ್ಕೂಟಕ್ಕೆ ಭರ್ಜರಿ ಗೆಲುವು; ಎಬಿವಿಪಿಗೆ ಹೀನಾಯ...

    ಮತ್ತೆ ಕೆಂಪಾದ ಜೆಎನ್‌ಯು: ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಡ ಒಕ್ಕೂಟಕ್ಕೆ ಭರ್ಜರಿ ಗೆಲುವು; ಎಬಿವಿಪಿಗೆ ಹೀನಾಯ ಸೋಲು

    ಹೊಸದಿಲ್ಲಿ : ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಪ್ರಮುಖ ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿಕಾಸ್‌ ‍ಪಟೇಲ್‌ ಅವರನ್ನು ಸೋಲಿಸಿವೆ.

    Advertisement

    ಅಖಿಲ ಭಾರತ ವಿದ್ಯಾರ್ಥಿಗಳ ಅಸೋಸಿಯೇಷನ್‌ (ಎಐಎಸ್‌ಎ), ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಫೆಡರೇಷನ್‌ (ಡಿಎಸ್‌ಎಫ್) ಸಂಘಟನೆಳು ಎಡ ಒಕ್ಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿವೆ.

    ಎಬಿವಿಪಿಯ ವಿಕಾಸ್‌ ‍ಪಟೇಲ್‌ ಅವರನ್ನು 449 ಮತಗಳಿಂದ ಸೋಲಿಸಿ ಅದಿತಿ ಮಿಶ್ರಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಉಪಾಧ್ಯಕ್ಷರ ಸ್ಥಾನಕ್ಕೆ ಗೋಪಿಕಾ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್‌ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡ್ಯಾನಿಶ್‌ ಅಲಿ ಗೆಲುವು ಸಾಧಿಸಿದ್ದಾರೆ.

    ಎಡ ಒಕ್ಕೂಟದ ಪ್ರಬಲ ಪ್ರಚಾರ, ವಿದ್ಯಾರ್ಥಿ ಹಕ್ಕುಗಳ ಕುರಿತು ಘೋಷಣೆಗಳು ಹಾಗೂ ಕ್ಯಾಂಪಸ್‌ನಲ್ಲಿ ನಡೆದ ಚರ್ಚೆಗಳು ಚುನಾವಣಾ ಹೋರಾಟಕ್ಕೆ ಮೆರಗು ನೀಡಿತ್ತು. ಫಲಿತಾಂಶ ಬಳಿಕ ಎಡ ಒಕ್ಕೂಟದ ವಿದ್ಯಾರ್ಥಿಗಳು ಜೆಎನ್‌ಯು ಮತ್ತೆ ಕೆಂಪಾಗಿದೆ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading