Wednesday, November 4, 2026
spot_img
More
    spot_img
    HomeLatest newsಉಗ್ರರು, ಉಮೇಶ್ ರೆಡ್ಡಿ ಕೈಯಲ್ಲಿ ಮೊಬೈಲ್. ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಜೀವನ!

    ಉಗ್ರರು, ಉಮೇಶ್ ರೆಡ್ಡಿ ಕೈಯಲ್ಲಿ ಮೊಬೈಲ್. ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಜೀವನ!

    ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣ ಭಾರೀ ಸದ್ದು ಮಾಡಿತ್ತು. ದರ್ಶನ್ ಜಾಮೀನು ರದ್ದು ಮಾಡುವಾಗ ಸುಪ್ರೀಂಕೋರ್ಟ್ ಜೈಲಿನ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿತ್ತು. ಆದರೆ ಜೈಲಿನ ಅಧಿಕಾರಿಗಳು ಬುದ್ಧಿ ಕಲಿತಿಲ್ಲ.

    ಶನಿವಾರ ವೈರಲ್ ಆಗಿರುವ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಏನು ಮಾಡುತ್ತಿದ್ದಾರೆ?. ಹಣಕ್ಕಾಗಿ ಏನು ಬೇಕಾದರೂ ಮಾಡಲಿದ್ದಾರೆಯೇ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

    ಬೆಂಗಳೂರು ಜೈಲಿನಲ್ಲಿರುವ ಉಗ್ರರು, ಗಲ್ಲು ಶಿಕ್ಷೆಗೆ ಗುರಿಯಾಗಿರುವ ವಿಕೃತ ಕಾಮಿ ಉಮೇಶ್ ರೆಡ್ಡಿ ಮೊಬೈಲ್ ಬಳಕೆ ಮಾಡುತ್ತಿರುವ ವಿಡಿಯೋಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಕಾರ್ಯ ವೈಖರಿ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.

    ಬಿಜೆಪಿ ಪೋಸ್ಟ್: ಈ ಕುರಿತ ವಿಡಿಯೋವನ್ನು ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ‘ಲೂಟಿಕೋರ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಜೈಲುಗಳು ಪಾರ್ಟಿ ಹಾಲ್‌ಗಳಾಗುತ್ತಿವೆ. ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವುದು ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ’ ಎಂದು ಟೀಕಿಸಿದೆ.

    ‘ಕೈದಿಗಳಿಗೆ ಮೊಬೈಲ್‌, ಗಾಂಜಾ ಹಾಗೂ ನಿಷಿದ್ಧ ವಸ್ತುಗಳು ಸುಲಭವಾಗಿ ಸಿಗುತ್ತಿದ್ದರೂ ʼಗೊತ್ತಿಲ್ಲʼ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಗಾಢನಿದ್ರೆಗೆ ಜಾರಿದ ಪರಿಣಾಮ ಜೈಲಿನಲ್ಲಿ ಅಕ್ರಮ ಚುಟುವಟಿಕೆಗಳು ಹೆಚ್ಚುತ್ತಿವೆ’ ಎಂದು ಹೇಳಿದೆ.

    ‘ಸ್ವಾಮಿ ಸಿದ್ದರಾಮಯ್ಯನವರೇ ಅಸಮರ್ಥ ಗೃಹ ಸಚಿವರಿಂದ ಕಳ್ಳಕಾರಿಗೆ, ಸಮಾಜಘಾತುಕ ಶಕ್ತಿಗಳಿಗೆ ಪ್ರೋತ್ಸಾಹ ಸಿಗುತ್ತಿದೆ.! ಕೂಡಲೇ ʼಗೊತ್ತಿಲ್ಲʼ ಗೃಹ ಸಚಿವರನ್ನು ಕೈಬಿಡಿ, ರಾಜ್ಯದಲ್ಲಿ ಶಾಂತಿ ಕಾಪಾಡಿ’ ಎಂದು ಸರ್ಕಾರವನ್ನು ಬಿಜೆಪಿ ಆಗ್ರಹಿಸಿದೆ.

    ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ 7 ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿತ್ತು. ದರ್ಶನ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸಹ ಜೈಲಿನ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತ್ತು.

    ಆದರೆ ಶನಿವಾರ ವೈರಲ್ ಆಗಿರುವ ವಿಡಿಯೋದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಜೈಲು ನಿಯಮಗಳಿಗೆ ವಿರುದ್ಧವಾಗಿ ವಿವಿಧ ಸೌಲಭ್ಯಗಳನ್ನು ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಗಳು, ಅಪರಾಧಿಗಳ ಕೈಯಲ್ಲಿ ಸ್ಮಾರ್ಟ್ ಫೋನ್‌ಗಳಿವೆ.

    ಗಲ್ಲು ಶಿಕ್ಷೆಗೆ ಗುರಿಯಾಗಿರುವ ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಚಿನ್ನಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತ ಆರೋಪಿ, ನಟಿ ರನ್ಯಾ ರಾವ್‌ ಪ್ರಿಯಕರ ತರುಣ್‌ ರಾಜ್‌ ಜೈಲಿನಲ್ಲಿ ಆರಾಮವಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಈ ವಿಡಿಯೋಗಳು ವೈರಲ್ ಆಗುತ್ತಿವೆ.

    ವಿಡಿಯೋ ವೈರಲ್ ಆದ ಬಳಿಕ ಕಾರಾಗೃಹ ಇಲಾಖೆ ಮಹಾನಿರ್ದೇಶಕ ಬಿ.ದಯಾನಂದ ಈ ವಿಷಯದ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದು, ಹೈಪ್ರೊಫೈಲ್ ಕೈದಿಗಳಾದ ಉಮೇಶ್ ರೆಡ್ಡಿ ಮತ್ತು ತರುಣ್ ರಾಜು ಸೇರಿದಂತೆ ಕೆಲವರನ್ನು ಒಳಗೊಂಡಿರುವ ಆ ವಿಡಿಯೋಗಳ ನಿಖರತೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ವೈರಲ್ ಆಗಿರುವ ವಿಡಿಯೋದಲ್ಲಿ ಉಮೇಶ್ ರೆಡ್ಡಿ ಜೈಲಿನಲ್ಲಿ ಟಿವಿ, ಮೊಬೈಲ್‌ ಬಳಕೆ ಮಾಡುತ್ತಿದ್ದಾನೆ. ಅಡುಗೆ ಮಾಡಿಕೊಳ್ಳಲು ಜೈಲಿನೊಳಗೇ ಅಧಿಕಾರಿಗಳು ಸೌಲಭ್ಯ ಕಲ್ಪಿಸಿರುವುದು ತಿಳಿದುಬರುತ್ತಿದೆ. ಉಮೇಶ್‌ ರೆಡ್ಡಿ ನೋಡುತ್ತಾ ಮೊಬೈಲ್‌ನಲ್ಲಿ ಮಾತನಾಡುತ್ತಾ ಕಾಲ ಕಳೆಯತ್ತಿದ್ದಾನೆ.

    ಮತ್ತೊಂದು ವಿಡಿಯೋದಲ್ಲಿ ಐಎಸ್ಐಎಸ್‌ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ರಾಜಾರೋಷವಾಗಿ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿದ್ದಾನೆ. ಅಧಿಕಾರಿಗಳಿಗೆ ದುಡ್ಡು ಕೊಟ್ಟರೇ ‌ಭಯೋತ್ಪಾದಕರಿಗೂ ಎಲ್ಲಾ ಸೌಲಭ್ಯ ಸಿಗಲಿದೆ ಎಂಬುದು ಸಾಬೀತಾಗಿದೆ.

    ಉಗ್ರ ಹಮೀದ್ ಶಕೀಲ್ ಮನ್ನಾ ಬೆಂಗಳೂರಿನ ತಿಲಕ್‌ನಗರದ ನಿವಾಸಿ. ಯುವಕರನ್ನು ಆತ ಐಎಸ್‌ಐಎಸ್‌ಗೆ ನೇಮಕ ಮಾಡಿಕೊಳ್ಳುತ್ತಿದ್ದ. ಇಕ್ರಾ ಸರ್ಕಾಲ್‌ ಹೆಸರಿನಲ್ಲಿ ಆನ್‌ಲೈನ್‌ ಗ್ರೂಪ್‌ ರಚಿಸಿ ಉಗ್ರರ ಸಂಘಟನೆಗೆ ನೇಮಕಾತಿ ನಡೆಸುತ್ತಿದ್ದ. ಇಂತಹ ಉಗ್ರನ ಕೈಯಲ್ಲಿ ಜೈಲಿನೊಳಗೆ ಸ್ಮಾರ್ಟ್ ಫೋನ್ ಇರುವುದು ವಿಡಿಯೋದಲ್ಲಿ ಬಹಿರಂಗವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search