Thursday, September 24, 2026
spot_img
More
    spot_img
    HomeLatest newsಶೈಕ್ಷಣಿಕ ನೆರವು: ಸಾಂದೀಪನಿ ಶಿಷ್ಯವೇತನಕ್ಕೆ 2025-26 ಸಾಲಿನ ಅರ್ಜಿ ಸಲ್ಲಿಕೆ ಪ್ರಾರಂಭ!

    ಶೈಕ್ಷಣಿಕ ನೆರವು: ಸಾಂದೀಪನಿ ಶಿಷ್ಯವೇತನಕ್ಕೆ 2025-26 ಸಾಲಿನ ಅರ್ಜಿ ಸಲ್ಲಿಕೆ ಪ್ರಾರಂಭ!

    ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು (Karnataka State Brahmin Development Board – KSBDB) ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಮತ್ತು ವೃತ್ತಿಪರ ಶಿಕ್ಷಣಕ್ಕೆ ನೆರವಾಗಲು ‘ಸಾಂದೀಪನಿ ಶಿಷ್ಯವೇತನ’ ಯೋಜನೆಗೆ 2025-26ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

    ಯೋಜನೆಯ ಮುಖ್ಯ ಉದ್ದೇಶ: ಶೈಕ್ಷಣಿಕ ನೆರವು ನೀಡುವುದರ ಮೂಲಕ ಆರ್ಥಿಕವಾಗಿ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವುದು. ಈ ಕಾರ್ಯಕ್ರಮವು ರಾಜ್ಯ ಸರ್ಕಾರದ ಅನುದಾನದಿಂದ ನಡೆಯುತ್ತಿದ್ದು, ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಪುಸ್ತಕ/ಉಪಕರಣಗಳ ವೆಚ್ಚ ಹಾಗೂ ವಸತಿ/ಸಾರಿಗೆಯಂತಹ ಜೀವನ ವೆಚ್ಚಗಳನ್ನು ಭರಿಸಲು ಸಹಾಯಧನ ಮತ್ತು ಭತ್ಯೆಗಳನ್ನು ಒದಗಿಸುತ್ತದೆ.

    ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು 2026ರ ಫೆಬ್ರವರಿ 28ರೊಳಗೆ SSP ಅಧಿಕೃತ ಜಾಲತಾಣ https://ssp.postmatric.karnataka.gov.in/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಕಾಲದಲ್ಲಿ ಶೈಕ್ಷಣಿಕ ನೆರವು ಒದಗಿಸುವುದು ಈ ಯೋಜನೆಯ ಮೂಲಭೂತ ಗುರಿಯಾಗಿದೆ

    ಪಿ.ಯು.ಸಿ, ಡಿಪ್ಲೋಮಾ ಹಾಗೂ ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚವಾಗಿ ₹15,000 (ಮಾಹೆಯಾನ 1,500 ರಂತೆ ಒಟ್ಟು 10 ತಿಂಗಳು) ಸಹಾಯಧನವನ್ನು ನೀಡಲಾಗುತ್ತದೆ.

    ಪದವಿ/ಸ್ನಾತಕೋತ್ತರ ಪದವಿಯ ವಿವಿಧ ಕೋರ್ಸ್ ಗಳಿಗೆ (ಸಿಇಟಿ ಅಥವಾ UG/PG NEET ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಅರ್ಹತೆ ಪಡೆದು ದಾಖಲಾದ ವಿದ್ಯಾರ್ಥಿಗಳಿಗೆ ಅವರು ದಾಖಲಾತಿ ಸಂದರ್ಭದಲ್ಲಿ ಪಾವತಿಸಿರುವ ಸರ್ಕಾರಿ ಶುಲ್ಕದ 2/3 ಭಾಗವನ್ನು ಅಂದರೆ (ಗರಿಷ್ಠ ಮೊತ್ತ 01 ಲಕ್ಷರೂ. ವರೆಗೆ) ಮಿತಿಗೊಳಿಸಿ ಸಹಾಯಧನವನ್ನು ಪಾವತಿ ಮಾಡಲಾಗುತ್ತದೆ.

    ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

    ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ ಡಿಸೆಂಬರ್ 03, 2025

    ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28, 2026

    ಸಾಂದೀಪನಿ ಶಿಷ್ಯವೇತನ: ಪ್ರಮುಖ ಅರ್ಹತಾ ಮಾನದಂಡಗಳು

    ಸಾಂದೀಪನಿ ಶಿಷ್ಯವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಕಡ್ಡಾಯ ಮಾನದಂಡಗಳನ್ನು ಪೂರೈಸಬೇಕು:

    ಸಮುದಾಯ: ಅರ್ಜಿದಾರರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿರಬೇಕು.

    ವಾರ್ಷಿಕ ಆದಾಯ ಮಿತಿ: ವಿದ್ಯಾರ್ಥಿಯ ಪೋಷಕರ ಕುಟುಂಬದ ಒಟ್ಟು ವಾರ್ಷಿಕ ಆದಾಯವು ₹8.00 ಲಕ್ಷ ರೂ. ಮಿತಿಯೊಳಗೆ ಇರಬೇಕು.

    ನಿವಾಸ: ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು ಮತ್ತು ಅದರಲ್ಲಿ ಕರ್ನಾಟಕದ ಖಾಯಂ ನಿವಾಸದ ವಿಳಾಸವಿರಬೇಕು.

    ಅಧ್ಯಯನ ಮಟ್ಟ: ಕರ್ನಾಟಕ ಸ್ಟೇಟ್ ಸಿಲೆಬಸ್ ಅಡಿಯಲ್ಲಿ ಬರುವ ಸರ್ಕಾರಿ/ಸ್ಥಳೀಯ ಸಂಸ್ಥೆ/ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ (Post-Matric Courses) ವ್ಯಾಸಂಗ ಮಾಡುತ್ತಿರಬೇಕು.

    ಶೈಕ್ಷಣಿಕ ಪ್ರಗತಿ: ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.

    ಕುಟುಂಬ ಮಿತಿ: ಒಂದೇ ಕುಟುಂಬದ ಗರಿಷ್ಠ ಇಬ್ಬರು ಗಂಡು ಮಕ್ಕಳಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ. ಆದರೆ, ಈ ಮಿತಿಯು ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ

    ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

    ಆಧಾ‌ರ್ ಸಂಖ್ಯೆ

    ಮೊಬೈಲ್ ಸಂಖ್ಯೆ

    ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ

    ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ

    ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ

    ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading