Friday, September 25, 2026
spot_img
More
    spot_img
    HomeStateDistrictಬೆಳಗಾವಿಯಲ್ಲೂ ನಾಯಕತ್ವ ಬದಲಾವಣೆ ಚರ್ಚೆ: ಡಿ.ಕೆ.ಶಿವಕುಮಾರ್ ಬೇಡಿಕೆಗೆ ಕೆಂಪು ಬಾವುಟ ತೋರಿಸಿದ ಹೈಕಮಾಂಡ್!

    ಬೆಳಗಾವಿಯಲ್ಲೂ ನಾಯಕತ್ವ ಬದಲಾವಣೆ ಚರ್ಚೆ: ಡಿ.ಕೆ.ಶಿವಕುಮಾರ್ ಬೇಡಿಕೆಗೆ ಕೆಂಪು ಬಾವುಟ ತೋರಿಸಿದ ಹೈಕಮಾಂಡ್!

    ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗಿದೆ. ಡಿಸೆಂಬರ್ 8 ರಿಂದ 19ರ ತನಕ ಚಳಿಗಾಲದ ಅಧಿವೇಶನ ನಡೆಯಲಿದೆ. ಕರ್ನಾಟಕ ಕಾಂಗ್ರೆಸ್‌ನ ನಾಯಕತ್ವ ಬದಲಾವಣೆ ಚರ್ಚೆ ಈಗ ಬೆಳಗಾವಿಗೆ ಶಿಫ್ಟ್ ಆಗಿದೆ.

    ಬೆಂಗಳೂರಿನಲ್ಲಿ ಎರಡು ಬೇಕ್‌ ಫಾಸ್ಟ್ ಮೀಟಿಂಗ್‌ಗಳು ನಡೆದಿದ್ದವು.  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗಿನ ಉಪಹಾರಕೂಟದ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪಕ್ಷದ ವರಿಷ್ಠರ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ” ಎಂದು ಹೇಳಿದ್ದರು.

    ಬೆಳಗಾವಿಯಲ್ಲಿ ಮಾತನಾಡಿದ ಎಂಎಲ್‌ಸಿ, ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಚರ್ಚೆಗೆ ಹೊಸ ಆಯಾಮ ನೀಡಿದ್ದಾರೆ.  ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳುವ ಮೂಲಕ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

    ಡಾ.ಯತೀಂದ್ರ ಹೇಳಿಕೆ: ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, “ಡಿ.ಕೆ.ಶಿವಕುಮಾರ್ ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಹೈಕಮಾಂಡ್ ನಾಯಕರು ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೇಳಿದೆ. ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟವಿಲ್ಲ. ಇದೆಲ್ಲ ಪ್ರತಿಪಕ್ಷಗಳ ಸೃಷ್ಟಿ” ಎಂದು ಹೇಳಿದರು.

    “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ. ಈ ರೀತಿ ವದಂತಿ ಹಬ್ಬಿಸಿದವರು ಪ್ರತಿಪಕ್ಷಗಳು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ  5 ವರ್ಷ ಪೂರೈಸುತ್ತಾರೆ ಎಂಬ ನಂಬಿಕೆ ವೈಯಕ್ತಿಕವಾಗಿ ನನಗಿದೆ” ಎಂದರು.

    “ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಹೈಕಮಾಂಡ್ ನಾಯಕರು ಸಹ ಸಿದ್ದರಾಮಯ್ಯರನ್ನು ಮಾತುಕತೆಗೆ ಆಹ್ವಾನಿಸಿಲ್ಲ” ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

    ಸಿದ್ದರಾಮಯ್ಯ, ‘ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ” ಎಂದು ಹೇಳಿದ್ದರು.

    “ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್‌ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು. ಆದರೆ ಗೊಂದಲ ಸೃಷ್ಟಿಯಾಗಿರುವುದು ಕೆಲವು ಮಾಧ್ಯಮಗಳಿಂದ” ಎಂದು ಆರೋಪಿಸಿದ್ದರು. 

    “ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಈ ವರೆಗೆ ಎದುರಿಸಿದ್ದೇವೆ, ಮುಂದೆಯೂ ಎದುರಿಸುತ್ತೇವೆ. ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದರು.

    ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ. ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್‌ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್‌ ಗುಂಪು” ಎಂದು ತಿಳಿಸಿದ್ದರು.

    “ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ. ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಅದು ನಮ್ಮ ಕರ್ತವ್ಯ. ಪ್ರತಿಯೊಬ್ಬ ಶಾಸಕರನ್ನು, ಕಾರ್ಯಕರ್ತರನ್ನು ಮತ್ತು ನಮ್ಮ ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸಬೇಕು” ಎಂದು ಹೇಳಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading