Friday, August 7, 2026
spot_img
More
    spot_img
    HomeTop Story16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

    16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

    ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

    Advertisement


    ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಶ್ರೀ ಕಿಶೋರ್ ಕುಮಾರ್, ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.


    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಲಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.


    16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿ ಗೋಷ್ಠಿಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ “ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣಾಥಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading