Friday, August 7, 2026
spot_img
More
    spot_img
    HomeTop Storyಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮನುಷ್ಯರ ತಲೆ ಬುರುಡೆ, ಅಸ್ಥಿಪಂಜರ ಪತ್ತೆ

    ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮನುಷ್ಯರ ತಲೆ ಬುರುಡೆ, ಅಸ್ಥಿಪಂಜರ ಪತ್ತೆ

    ತಿರುವನಂತಪುರಂ: ಕಳೆದ 20 ವರ್ಷಗಳಿಂದ ಕೇರಳದಲ್ಲಿ ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮನುಷ್ಯರ ತಲೆ ಬುರುಡೆ ಮತ್ತು ಆಸ್ಥಿಪಂಜರ ಪತ್ತೆಯಾಗಿದೆ.

    Advertisement

    ಇದು ಕೊಲೆ ಇರಬಹುದು ಎಂದು ಅಭಿಪ್ರಾಯಪಟ್ಟಿರುವ ಚೊಟ್ಟಣಿಕ್ಕರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಈ ಅಸ್ಥಿಯನ್ನು ಮಾನವನ ಮೂಳೆಗಳು ಎಂದು ಗುರುತಿಸಲಾಗಿದೆ.

    ಫೋರೆನ್ಸಿಕ್ಸ್ ವಿಶ್ಲೇಷಣೆಯ ಮೂಲಕ ನಿಖರವಾದ ವಯಸ್ಸನ್ನು ಪರಿಶೀಲಿಸಬೇಕಾಗಿದೆ ಎಂದಿರುವ ಪೆÇಲೀಸರು ಇದನ್ನು ಶೈಕ್ಷಣಿಕ ಉದ್ದೇಶಗಳಿಗಾಗಿಯೂ ಬಳಸಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

    ವಿಧಿವಿಜ್ಞಾನ ತಂಡವು ತಲೆ ಬುರುಡೆ ಮತ್ತು ಅಸ್ಥಿಪಂಜರದ ಭಾಗಗಳನ್ನು ಪರೀಕ್ಷಿಸಿ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದೆ. ಅವುಗಳನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ಬಳಸಿರುವ ಸಾಧ್ಯತೆ ಇದೆ. ಅಸ್ಥಿಪಂಜರ, ತಲೆಬುರುಡೆ ಮಹಿಳೆಯರದ್ದು, ಆದರೆ ಅವುಗಳ ವಯಸ್ಸು ಮತ್ತು ಮೂಲವನ್ನು ಪತ್ತೆ ಹಚ್ಚುವುದು ಕಠಿಣವಾದರೂ ಈ ಬಗ್ಗೆ ಕೂಡ ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಎರುವೇಲಿ ಪೂರ್ವದ ಚೊಟ್ಟಣಿಕ್ಕರ ಅರಮನೆ ಚೌಕದಲ್ಲಿರುವ 12 ಎಕರೆ ಜಾಗದಲ್ಲಿ ಪಾಳು ಬಿದ್ದ ಮನೆಯಿದೆ. ಈ ಆಸ್ತಿ ವೈದ್ಯ ಮಂಗಳಶ್ಶೇರಿ ಫಿಲಿಪ್ಸ್ ಜಾನ್ ಅವರಿಗೆ ಸೇರಿದ್ದಾಗಿದೆ. ಕಳೆದ 20 ವರ್ಷಗಳಿಂದ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ಆದರೂ ಮನೆಗೆ ಮೂಳೆಗಳು ಹೇಗೆ ಬಂದಿವೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮನೆಯ ಮಾಲೀಕರು, ವೈದ್ಯರು ಮತ್ತು ನೆರೆಹೊರೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಾಳು ಬಿದ್ದ ಮನೆಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಸ್ಥಳೀಯ ಪಾಲಿಕೆ ಸದಸ್ಯೆ ಇಂದಿರಾ ಧರ್ಮರಾಜನ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading