Friday, August 7, 2026
spot_img
More
    spot_img
    HomeTop Storyಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ ಹಳ್ಳ ಹಿಡಿಯುತ್ತಿದೆ: ಬಿಜೆಪಿ ಕಿಡಿ

    ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ ಹಳ್ಳ ಹಿಡಿಯುತ್ತಿದೆ: ಬಿಜೆಪಿ ಕಿಡಿ

    Advertisement

    ಬೆಂಗಳೂರು: ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕಮಿಷನ್‌ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

    ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯ್ಲಲಿ ಪೋಸ್ಟ್‌ ಮಾಡಿರುವ ರಾಜ್ಯ ಬಿಜೆಪಿಯು ಸಿಐಡಿ ತನಿಖೆಯಲ್ಲಿ ಖರ್ಗೆ ಕುಟುಂಬದ ಪ್ರಭಾವ ಎದ್ದು ಕಾಣುತ್ತಿದೆ. ಖರ್ಗೆ ಕುಟುಂಬದ ಹಸ್ತಕ್ಷೇಪದಿಂದಾಗಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನೂ ಬಂಧಿಸಿಲ್ಲ.

    ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ ಪಾಂಚಾಳ್ ಬರೆದಿರುವ ಡೆತ್‌ನೋಟ್‌ನಲ್ಲಿ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಪ್ರಿಯಾಂಕ್‌ ಖರ್ಗೆಯ 9 ಮಂದಿ ಅತ್ಯಾಪ್ತರ ಹೆಸರು ಉಲ್ಲೇಖಗೊಂಡಿದೆ. ಆದರೆ ಸಿಐಡಿ ತನಿಖೆ ಆರಂಭವಾಗಿ 13 ದಿನ ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ.

    ಪ್ರಕರಣದಲ್ಲಿ ಕೇವಲ ಸಚಿವರ, ಸರ್ಕಾರದ ಪ್ರಭಾವವಲ್ಲದೆ, ಎಐಸಿಸಿ ಪ್ರಭಾವವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕುಟುಂಬ ಕೇಂದ್ರೀಕೃತವಾಗಿ ತನಿಖೆ ನಡೆಸದಂತೆ ತನಿಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.

    ಆದಷ್ಟು ಬೇಗ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಬೇಕು. ಸಚಿನ್‌ ಆತ್ಮಹತ್ಯೆಗೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading