Friday, August 7, 2026
spot_img
More
    spot_img
    HomeTop Storyಆರು ಮಂದಿ ನಕ್ಸಲರ ಶರಣಾಗತಿ: ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

    ಆರು ಮಂದಿ ನಕ್ಸಲರ ಶರಣಾಗತಿ: ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

    ಬೆಂಗಳೂರು: ಆರು ಮಂದಿ ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಸಂತಸ ವ್ಯಕ್ತಪಡಿಸಿದ್ದಾರೆ.

    Advertisement

    ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ಮಂದಿ ನಕ್ಸಲೀಯರು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದ ಮುಖ್ಯವಾಹಿನಿಗೆ ಹಿಂದಿರುಗಿ ಬಂದಿರುವುದರಿಂದ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದರು.

    ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್‌ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರ್ಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಆಗಿದೆ. ಇದರಲ್ಲಿ ರಾಜಕೀಯ ಮಾಡಲು ಹೋಗಬಾರದು ಎಂದರು.

    ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದೆ. ಯುಜಿಸಿ ನಿಯಮಾವಳಿಗಳಿಗೆ ತರಲು ಹೊರಟಿರುವ ಬದಲಾವಣೆಯಲ್ಲೂ ಇದೇ ಅಜೆಂಡಾ ಇದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವ ಸಮಸ್ಯೆಯೂ ಇಲ್ಲ. ಬೆಳಗಾವಿಯಲ್ಲಿ ಸಂವಿಧಾನ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಇನ್ನು ಕೆಲ ಶಾಸಕರು ಸೇರಿಕೊಂಡು ಔತಣ ಮಾಡಿದ್ದರಲ್ಲಿ ತಪ್ಪೇನೂ ಇಲ್ಲ. ಸಚಿವರಾದ ಈಶ್ವರ್‌ ಖಂಡ್ರೆ ಅವರಾಗಲಿ, ನಾನಾಗಲಿ ಯಾರನ್ನೂ ಔತಣಕ್ಕೆ ಕರೆದಿಲ್ಲ. ಲಿಂಗಾಯತ ಶಾಸಕರ ಸಭೆಯನ್ನೂ ನಾವ್ಯಾರು ಕರೆದಿಲ್ಲ. ಡಿನ್ನರ್‌ ಪಾರ್ಟಿ ಬಗ್ಗೆ ಹೆಚ್ಚು ಮಾತನಾಡುವುದು ಅನಗತ್ಯ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading